ಚಿಕ್ಕಮಗಳೂರು-ಮೈಸೂರು ಸಂಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇಧಾವಿ, ತಂತ್ರಜ್ಞ, ಭಾರತದ ಭಾಗ್ಯ ವಿಧಾತ ಸರ್.ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಕೊಡುಗೆ ಅಪಾರವಾದುದು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್ ಸ್ಮರಿಸಿದರು.
ಅವರು ನಗರದ ಲೋಕೋಪಯೋಗಿ ಇಲಾಖೆ ಕಛೇರಿ ಆವರಣದಲ್ಲಿ ನಡೆದ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ೧೬೧ನೇ ಜಯಂತೋತ್ಸವದ ಅಂಗವಾಗಿ ಸರ್.ಎಂ.ವಿ ಅವರ ಪುತ್ಥಳಿಗೆ ಮಾಲಾರ್ಪಾಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ ಕಂಡಂತಹ ಅತ್ಯಂತ ಮೇಧಾವಿ ಸರ್.ಎಂ ವಿಶ್ವೇಶ್ವರಯ್ಯ ಅವರು ಕೇವಲ ಇಂಜಿನಿಯರ್ ಆಗಿರದೆ ಉತ್ತಮ ಆಡಳಿತಗಾರರು ಆಗಿದ್ದರು. ಯಾವುದೇ ಕೆಲಸವಾಗಲಿ ಅದನ್ನು ಹೇಗೆ ಮಾಡಬೇಕು ಮತ್ತು ಹೇಗೆ ಮಾಡಿಸಬೇಕು ಎಂಬುದನ್ನು ಚೆನ್ನಾಗಿ ತಿಳಿದಿದ್ದರು. ವಿಶ್ವೇಶ್ವರಯ್ಯ ನಾಡಿನ ಏಳಿಗೆಗಾಗಿ ಶ್ರಮಿಸಿದವರು. ಸ್ವಾತಂತ್ರ್ಯ ಪೂರ್ವದಲ್ಲೇ ನವ ಭಾರತದ ಕನಸನ್ನು ಕಂಡಿದ್ದ ಸರ್ ಎಂ ವಿ ರವರು ಅದಕ್ಕಾಗಿ ಅನೇಕ ಯೋಜನೆಗಳನ್ನು ತಂದರು. ಕೃಷಿ, ಶಿಕ್ಷಣ, ಆರ್ಥಿಕ ವ್ಯವಸ್ಥೆ, ಕೈಗಾರಿಗೆ ಹೀಗೆ ಒಂದು ನಾಡು ಎಲ್ಲಾ ವಿಭಾಗದಲ್ಲೂ ಅಭಿವೃದ್ಧಿ ಹೊಂದಲು ಬೇಕಾದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ವಿಶ್ವೇಶ್ವರಯ್ಯನವರ ಪಾತ್ರ ದೊಡ್ಡದು ಎಂದು ಸ್ಮರಿಸಿದರು.
ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಹೊರ ರಾಜ್ಯ ಮತ್ತು ಹೊರ ದೇಶಗಳಿಗೂ ಅವರ ಸಾಧನೆ ವಿಸ್ತರಿಸಿದೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಅಡಿಪಾಯ ಹಾಕಿದವರು. ಕನ್ನಂಬಾಡಿ ಅಣೆಕಟ್ಟು ನಿರ್ಮಾಣ, ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ಸರಕಾರಿ ಸಾಬೂನು ಕಾರ್ಖಾನೆ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಕನ್ನಡ ಸಾಹಿತ್ಯ ಪರಿ?ತ್, ಮೈಸೂರು ವಿವಿ, ಶಿವನಸಮುದ್ರ, ಜೋಗದ ಜಲವಿದ್ಯುತ್ ಯೋಜನೆ, ಒಳಗೊಂಡಂತೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಅವರ ಸವಿನೆನಪಿಗಾಗಿ ದೇಶಾದ್ಯಂತ ಅವರ ಹುಟ್ಟಿದ ದಿನವನ್ನು ಇಂಜಿನಿಯರ್ ದಿನವನ್ನಾಗಿ ಆಚರಿಸಲಾಗುತ್ತಿದ್ದು ಅವರ ಸರಳತೆ, ಶಿಸ್ತು, ಸಮಯಪಾಲನೆ ಆದರ್ಶಗಳನ್ನು ಎಲ್ಲರೂ ಪರಿಪಾಲಿಸುವ ಮೂಲಕ ಅಳವಡಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಜೇಶ್ ಮಾತನಾಡಿ ಇಂಜಿನಿಯರಿಂಗ್ ಪದಕ್ಕೆ ಬೇರೆಯದ್ದೇ ರೂಪ ನೀಡಿದ ಸರ್.ಎಂ.ವಿ ಅವರ ಸಾಧನೆ ಒಂದೆರೆಡಲ್ಲ ಕನ್ನಂಬಾಡಿ ಕಟ್ಟೆ, ಹಿಂದೂಸ್ಥಾನ್ ಏರ್ಕ್ರಾಫ್ಟ್ ಫ್ಯಾಕ್ಟರಿ, ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ಸರ್ಕಾರಿ ಸಾಬೂನು ಕಾರ್ಖಾನೆ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಕನ್ನಡ ಸಾಹಿತ್ಯ ಪರಿ?ತ್, ಮೈಸೂರು ವಿವಿ, ಶಿವನಸಮುದ್ರ, ಜೋಗದ ಜಲವಿದ್ಯುತ್ ಯೋಜನೆ, ಬ್ಲಾಕ್ ಸಿಸ್ಟಮ್(ನೀರಾವರಿ ಯೋಜನೆ), ಮೈಸೂರು ಸಕ್ಕರೆ ಕಾರ್ಖಾನೆ, ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆ ಹೀಗೆ ದೊಡ್ಡ ಪಟ್ಟಿಯೇ ಇದೆ ಎಂದು ಹೇಳಿದರು.
ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯ ಮತ್ತು ಹೊರ ದೇಶಗಳಿಗೂ ಅವರ ಸಾಧನೆ ವಿಸ್ತರಿಸಿದೆ. ಪುಣೆಯ ಖಡಕ್ವಾಸ್ಲಾ ಜಲಾಶಯ ಹಾಗೂ ಒರಿಸ್ಸಾದ ಮಹಾನದಿ ಪ್ರವಾಹ ನಿಯಂತ್ರಣ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಯಶಸ್ವಿಯಾಗಿ ಪೂರೈಸಿದ ಮಹಾನ್ ಮೇಧಾವಿ. ನಾಡಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಸುವ, ಸಮಾಜವನ್ನು ಸರಿಯಾದ ದಿಕ್ಕಿನಲ್ಲಿ ಸಾಗುವಂತೆ ಯೋಜನೆ ರೂಪಿಸುವ ಇಂಜಿನಿಯರ್ ಗಳನ್ನು ರೂಪಿಸಿದರೆ ಇಂಜಿನಿಯರ್ ದಿನಕ್ಕೆ ಮತ್ತು ಸರ್.ಎಂ ವಿಶ್ವೇಶ್ವರಯ್ಯರಿಗೆ ನಿಜವಾದ ಗೌರವ ಸಲ್ಲುತ್ತದೆ ಎಂದರು.
ಇಂಜಿನಿಯರ್ ಸಂಘದ ಅಧ್ಯಕ್ಷ ನಾಗೇಂದ್ರ ಮಾತನಾಡಿ ಯಾವುದೇ ಕೆಲಸ ಕೀಳಲ್ಲ. ನಿನ್ನ ಕೆಲಸ ಈ ರಸ್ತೆಯ ಈ ಭಾಗವನ್ನು ಗುಡಿಸುವುದಾಗಿದ್ದರೆ, ಜಗತ್ತಿನ ಅತ್ಯಂತ ಸ್ವಚ್ಚ ರಸ್ತೆಯಾಗುವಂತೆ ಗುಡಿಸು. ಅದೃ? ಎನ್ನುವುದು ದೇವರ ಕೈಯಲ್ಲಿ ನಿಷ್ಕ್ರಿಯವಾಗಿರುವ ಸಾಧನವಲ್ಲ. ೧೦೨ ಎರಡು ವ?ಗಳ ತುಂಬು ಬದುಕನ್ನು ಕರ್ಮಯೋಗಿಯಂತೆ ಬಾಳಿದವರು ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಬದುಕಿ ನಾಡಿಗೆ ದುಡಿದು, ಸೇವೆ ಸಲ್ಲಿಸಿದ ನಮ್ಮ ನೆಲದ ಹೆಮ್ಮೆಯ ಈ ಭಾರತೀಯ, ತಮ್ಮ ಜೀವಿತಕಾಲದಲ್ಲಿಯೇ ದಂತಕತೆಯಾದರು.
ವಿಶ್ವೇಶ್ವರಯ್ಯನವರ ಅಗಾಧ ಪರಿಶ್ರಮ ದೂರದೃಷ್ಟಿ, ಸಮಾಜಮುಖಿ ಪ್ರೇರಕ ಶಕ್ತಿ, ಆದರ್ಶ, ಪ್ರಾಮಾಣಿಕತೆ, ಸಾಮರ್ಥ್ಯ, ಯೋಜನೆಗಳು ಇಂದಿಗೆ ಸದಾ ಅಜರಾಮರ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ಇಂಜಿನಿಯರ್ ಸಂಘದ ಕಾರ್ಯದರ್ಶಿ ವಿಶ್ವನಾಥ್, ಹಿರಿಯ ಉಪಾಧ್ಯಕ್ಷ ಕಿರಣ್‌ಕುಮಾರ್, ಪ್ರಕಾಶ್, ಭವಾನಿಶಂಕರ್, ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಜಯಕುಮಾರ್,ಖಜಾಂಚಿ ವಿನೋದ್, ಗೋಪಿನಾಥ್, ಕ್ರೀಡಾ ಕಾರ್ಯದರ್ಶಿ ಇರ್ಶಾದ್, ಧನುಷ್, ದಾಮಿನಿ, ನಗರಸಭೆ ಇಂಜಿನಿಯರ್ ಚಂದನ್, ಸುರೇಶ್, ನಾಗೇಂದ್ರ, ರಾಜೇಗೌಡ, ಗೋಪಿನಾಥ್, ವಿಜಯ್, ನಿಂಗರಾಜ್, ಮೋನಿಶಾ ರೋಜರಿಯಾ, ಸೇರಿದಂತೆ ಮತ್ತಿತರರು ಇದ್ದರು.

























Discussion about this post