ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.17ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ರಾಮನಗರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಿರುವುದಾಗಿ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಗಳ ಪರಿಣಾಮವಾಗಿ ಮಳೆಯಾಗಲಿದೆ. ಅ.18ರಿಂದ ಮಳೆ ದಿಢೀರ್ ತಗ್ಗಲಿದ್ದು, 21ರವರೆಗೆ ಹೆಚ್ಚು ಮಳೆಯಾಗುವ ಯಾವುದೇ ಸೂಚನೆಗಳಿಲ್ಲ. ಕೆಲವೆಡೆ ಮಾತ್ರ ಚದುರಿದಂತೆ ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ.
Discussion about this post