ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಭಾರತದ ಕಡೆ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ೨ ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಪ್ರಾಕೃತಿಕ ಮತ್ತು ನೈಸರ್ಗಿಕ ವಿಕೋಪ ಇಲಾಖೆಯ ಹಿರಿಯ ವಿಜ್ಞಾನಿ ಗವಾಸ್ಕರ್ ಮಾಹಿತಿ ನೀಡಿದ್ದಾರೆ
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ತುಂತುರು ಮಳೆಯಾಗಬಹುದು. ತುಂತುರು ಅಥವಾ ಜೋರು ಮಳೆ, ಒಟ್ಟಿನಲ್ಲಿ ಮಳೆಯಂತೂ ಜರೂರು ಆಗೇ ಆಗತ್ತೆ, ಮಳೆಯಾಗುವ ಸಾಧ್ಯತೆಯಂತೂ ಹೆಚ್ಚಿದೆ.
ಬೆಂಗಾಳೂರಿನಲ್ಲಿ ನಿನ್ನೆ ನಡುರಾತ್ರಿಯಿಂದಲೂ ಸಹ ಎಡಬಿಡದೆ ಮಳೆ ಸುರಿಯುತ್ತಿದೆ. ಇದೇ ರೀತಿ ಮಳೆ ರಾಜ್ಯಾದ್ಯಂತ ಮುಂದುವರೆಯುತ್ತದೆ ಎಂಬುದಾಗಿ ಹಿರಿಯ ವಿಜ್ಞಾನಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಾಗರಬಾವಿ, ಬಸವನಗುಡಿ, ಮಲ್ಲೇಶ್ವರಂ, ರಾಜಾಜಿನಗರ, ಆರ್ಆರ್ ನಗರ, ಹೆಬ್ಬಾಳ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಬನಶಂಕರಿ, ಪದ್ಮನಾಭನಗರ, ಹನುಮಂತನಗರ, ಗಿರಿನಗರ ಸೇರಿದಂತೆ ಹಲವೆಡೆ ರಾತ್ರಿಯಿಂದ ಒಂದೇ ಸಮನೆ ಮಳೆ ಸುರಿಯುತ್ತಿದೆ.
ಕೆಲವು ಕಡೆ ಮಳೆ ನೀರು ಬೇಸ್ ಮೆಂಟ್ ನಲ್ಲಿ ನುಗ್ಗಿದ್ದು, ಅಲ್ಲಿ ಇರಿಸಿದ್ದ ಸಾಮಾನು ಸರಂಜಾಮುಗಳು ನೀರಿನಿಂದಾಗಿ ಹಾಳಾಗಿವೆ. ಬೇಸ್ ಮೆಂಟ್ ನಲ್ಲಿದ್ದ ದಿನಸಿ ಅಂಗಡಿಗಳಲ್ಲಿದ್ದ ಲಕ್ಷಗಟ್ಟಲೆ ದಿನಸಿ ಸಾಮಾನು ನೀರಿನಲ್ಲಿ ಹಾಳಾಗಿದೆ. ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇರುತ್ತವೆ. ಮನೆಗಳಿಗೂ ನೀರು ನುಗ್ಗುವ ವಿಪತ್ತು ಇದ್ದೇ ಇದೆ.
ಎಡಬಿಡದ ಮಳೆಯಿಂದಾಗಿ ವಿದ್ಯುತ್ ಸಹ ಸ್ಥಗಿತಗೊಂಡಿದ್ದರೆ, ಕೆಲವು ಏರಿಯಾಗಳಲ್ಲಿ ಆಗಾಗ್ಗೆ ವಿದ್ಯುತ್ ವ್ಯತ್ಯಯ ಉಂಟಾಗ್ತಾ ಇದೆ. ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಸುತ್ತಮುತ್ತ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಷಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಷಿಯಸ್ ದಾಖಲಾಗಲಿದೆ.
ಒಳಚರಂಡಿ ವ್ಯವಸ್ಥೆಯೇ ಅವ್ಯವಸ್ಥೆಯಾಗಿರುವ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಯೇ ಹೆಚ್ಚು. ಮಳೆಯಿಂದ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಮರಗಳು ಬಿದ್ದಿದ್ದು, ಇನ್ನು ಕೆಲವೆಡೆ ಮನೆ, ಅಪಾರ್ಟ್ಮೆಂಟ್ಗಳಿಗೆ ನೀರು ನುಗ್ಗಿದೆ. ಇಂದು ಸಂಜೆಯವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.

























Discussion about this post