ಚಿಕ್ಕಮಗಳೂರು: ಹರಿಯಾಣ ರಾಜ್ಯದ ಬಿವಾನಿಯಲ್ಲಿ ಸೆಪ್ಟಂಬರ್ ೧೮ ರಿಂದ ಸೆ.೨೦ ವರೆಗೆ ನಡೆಯಲಿರುವ ಅಖಿಲ ಭಾರತ ನಾಗರೀಕ ಸೇವಾ ಕಬಡ್ಡಿ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ತಂಡದ ಪ್ರತಿನಿಧಿಯಾಗಿ ಕೆ.ಎಸ್.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಬೆಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಅಪ್ಪಟ ಗ್ರಾಮೀಣ ಕ್ರೀಡಾ ಪ್ರತಿಭೆಯಾಗಿರುವ ಇವರು ಗ್ರಾಮೀಣ, ಜಿಲ್ಲಾ ಹಂತದ ದಸರಾ ಕ್ರೀಡಾಕೂಟ ಕಬ್ಬಡಿ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಹತ್ತಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಸದ್ಯ ಚಿಕ್ಕಮಗಳೂರಿನ ಜಯನಗರದ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಿಲಯ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿರುವ ಇವರು ಅಖಿಲ ಭಾರತ ನಾಗರೀಕ ಸೇವಾ ಕಬಡ್ಡಿ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವುದು ಜಿಲ್ಲೆಗೆ ಅತ್ಯಂತ ಹೆಮ್ಮೆ ತಂದಿದೆ.

























Discussion about this post