ಮುಂಬೈ : ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಹಾಗೂ ಆಕೆಯ ಪತಿ ಉದ್ಯಮಿ ರಾಜ್ ಕುಂದ್ರಾ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.
ಮುಂಬೈ ಮೂಲದ ಉದ್ಯಮಿ ಓರ್ವರಿಗೆ 1.51 ಕೋಟಿ ರೂಪಾಯಿ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಮುಂಬೈ ಉದ್ಯಮಿ ನಿತಿನ್ ಬರಾಯ್ ನೀಡಿದ ದೂರಿನ ಆಧಾರದ ಮೇಲೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ನವೆಂಬರ್ 13 ರಂದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಜುಲೈ 2014 ರಲ್ಲಿ, ಎಸ್ಎಫ್ಎಲ್ ಫಿಟ್ನೆಸ್ ಕಂಪನಿಯ ನಿರ್ದೇಶಕ ಕಾಶಿಫ್ ಖಾನ್, ಶಿಲ್ಪಾಶೆಟ್ಟಿ ಹಾಗು ಕುಂದ್ರಾ ಮತ್ತು ಇತರರು ಲಾಭ ಗಳಿಸಲು ಉದ್ಯಮಕ್ಕೆ 1.51 ಕೋಟಿ ರೂಪಾಯಿ ಹೂಡಿಕೆ ಮಾಡುವಂತೆ ಕೇಳಿದರು ಎಂದು ದೂರುದಾರರು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ, ಬಾಂದ್ರಾ ಪೊಲೀಸರು 420 (ವಂಚನೆ), 120-ಬಿ (ಕ್ರಿಮಿನಲ್ ಪಿತೂರಿ), 506 (ಅಪರಾಧದ ಬೆದರಿಕೆ) ಮತ್ತು 34 (ಸಾಮಾನ್ಯ ಉದ್ದೇಶ) ಸೇರಿದಂತೆ ವಿವಿಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಪ್ರಕರಣದ ತನಿಖೆ ನಡೆಯುತ್ತಿತ್ತು.
Discussion about this post