ಚಿಕ್ಕಮಗಳೂರು: ಪ್ರಾದೇಶಿಕ ಭಾಷೆಗಳ ಅಸ್ಥಿತ್ವಕ್ಕೆ ಮಾರಕವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನ್ನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಒತ್ತಾಯಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಬುಧವಾರ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಪ್ರಾದೇಶಿಕ ಅಸ್ಮಿತೆ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಂದಿನ ಪೀಳಿಗೆಗೆ ಕೊಡಬೇಕಾದ ಶಿಕ್ಷಣವನ್ನು ಜಾರಿಗೆ ತರಲು ಯಾವುದೇ ಮಹತ್ತರವಾದ ನೀತಿಯನ್ನು ರೂಪಿಸುವುದಕ್ಕೆ ಮುನ್ನ ಅದನ್ನು ಸಾರ್ವಜನಿಕ ಚರ್ಚೆಗೆ ಒಳಪಡಿಸಬೇಕು. ಸಂಸತ್ತಿನಲ್ಲಿ ಅದರ ಬಗ್ಗೆ ಸುದೀರ್ಘವಾದ ಚರ್ಚೆ ನಡೆದು ನಿರ್ಣಯವಾಗಬೇಕು ನಂತರ ನೂತನ ನೀತಿಯನ್ನು ಜಾರಿಗೆ ತರಬೇಕು ಎಂದರು.
ಕೇಂದ್ರ ಸರ್ಕಾರ ಇದ್ಯಾವುದನ್ನೂ ಮಾಡದೇ ಸರ್ವಾಧಿಕಾರಿ ಧೋರಣೆಯಿಂದ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ನೂತನ ನೀತಿಯಿಂದಾಗಿ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳ ಜೊತೆಗೆ ಜನರು ಮನೆಯಲ್ಲಿ ಮಾತನಾಡುವ ಭಾಷೆಗಳೂ ಸಹ ನಾಶವಾಗುತ್ತವೆ ಎಂದು ಎಚ್ಚರಿಸಿದರು.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಬೇಕು ಅಥವಾ ಪುನರ್ ಪರಿಶೀಲನೆ ಮಾಡಬೇಕು. ಇಲ್ಲದಿದ್ದಲ್ಲಿ ಕನಿಷ್ಟ ಒಂದು ವರ್ಷವಾದರೂ ನೀತಿಯ ಅನುಷ್ಟಾನವನ್ನು ಮುಂದೂಡಬೇಕು ಆ ಒಂದು ವರ್ಷದ ಅವಧಿಯಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ-ಬಾಧಕಗಳ ಬಗ್ಗೆ ದೇಶದ ಎಲ್ಲಾ ಶಾಸನ ಸಭೆಗಳಲ್ಲೂ ಮತ್ತು ಸಾರ್ವಜನಿಕವಾಗಿಯೂ ಚರ್ಚೆಯಾಗಬೇಕು ನಂತರ ಅನುಷ್ಟಾನದ ಬಗ್ಗೆ ಕೇಂದ್ರ ಚಿಂತನೆ ನಡೆಸಬೇಕು ಎಂದು ಹೇಳಿದರು.
ನೂತನ ಶಿಕ್ಷಣ ನೀತಿಯ ಕುರಿತು ವಿಚಾರ ಮಂಡನೆ ಮಾಡಿದ ಕಡೂರು ಮಾಜಿ ಶಾಸಕ ವೈ.ಎಸ್.ವಿ.ದತ್ತ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿರುವ ರೀತಿ ಖಂಡಿತವಾಗಿಯೂ ಸಂವಿಧಾನ ವಿರೋಧಿಯಾಗಿದೆ ಎಂದರು.
ಯಾವುದೇ ಮಹತ್ತರವಾದ ನೀತಿಯನ್ನು ಜಾರಿಗೆ ತರುವಾಗ ನೀತಿ, ನಿಯಮಗಳನ್ನು ಅನುಸರಿಸಬೇಕು. ಪ್ರಾದೇಶಿಕ ಭಾಷೆ, ಪ್ರಾದೇಶಿಕ ಅಸ್ಮಿತೆ, ಸಂಸ್ಕೃತಿಯನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರ ಅದ್ಯಾವುದನ್ನೂ ಮಾಡದೇ ಸರ್ವಾಧಿಕಾರಿ ಧೋರಣೆಯಿಂದ ಹೊಸ ಶಿಕ್ಷಣ ನೀತಿಯನ್ನು ರಾಜ್ಯಗಳ ಮೇಲೆ ಬಲವಂತವಾಗಿ ಹೇರಿದ್ದು ಅದು ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದರು.
ರಾಜ್ಯಸರ್ಕಾರ ಸಹ ಕೇಂದ್ರ ಸರ್ಕಾರದ ನೂತನ ನೀತಿಯನ್ನು ವಿಚಾರ, ವಿಮರ್ಶೆ ಮಾಡದೇ ಚರ್ಚೆ ಇಲ್ಲದೇ ಬೆಳಗಾಗುವುದರೊಳಗೆ ಏಕಾಏಕಿ ರಾಜ್ಯದಲ್ಲಿ ಜಾರಿಗೆ ತಂದಿರುವುದು ಮೂರ್ಖತನ. ಅದು ಗುಲಾಮಗಿರಿಯ ಸಂಕೇತವಾಗಿದೆ ಎಂದು ತಿಳಿಸಿದರು.
ದಲಿತರು, ಕಡು ಬಡವರು ಮತ್ತು ಗ್ರಾಮೀಣ ಮಕ್ಕಳನ್ನು ಪರಿಪೂರ್ಣವಾದ ಶಿಕ್ಷಣದಿಂದ ವಂಚಿಸಲು ಕೇಂದ್ರ ಸರ್ಕಾರ ಮಾಡಿರುವ ಹುನ್ನಾರ ಇದು. ಸರ್ಕಾರಿ ಶಾಲೆ ಮತ್ತು ಕಾಲೇಜುಗಳನ್ನು ಬಂಡವಾಳ ಶಾಹಿಗಳು ಮತ್ತು ಖಾಸಗಿಯವರ ಮಡಿಲಿಗೆ ಹಾಕಲು ಮಾಡಿರುವ ತಂತ್ರ ಇದು ಎಂದು ಆರೋಪಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಆಧುನೀಕರಣದ ಭರದಲ್ಲಿ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆ ಕಣ್ಮರೆಯಾಗುತ್ತಿರುವ ಇಂದಿನ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ-ಬಾಧಕ ಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ನಡೆದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಬಹುತೇಕ ಮುಖಂಡರು ರಾಷ್ಟ್ರೀಯ ಶಿಕ್ಷಣ ನೀತಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ರೈತ ಸಂಘದ ಮುಖಂಡ ಗುರುಶಾಂತಪ್ಪ, ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವೀಶ್ ಕ್ಯಾತನಬೀಡು, ಎಂ.ಸಿ.ಶಿವಾನಂದಸ್ವಾಮಿ, ಪ್ರೊ.ಕೆ.ಎನ್.ಲಕ್ಷ್ಮೀಕಾಂತ್, ಸಿಪಿಐ ಮುಖಂಡ ಬಿ.ಅಮ್ಜದ್, ಕಡೂರು ತಾಲ್ಲೂಕು ಕಸಾಪ ಅಧ್ಯಕ್ಷ ವೈ.ಎಸ್.ರವಿಪ್ರಕಾಶ್, ಕನ್ನಡಸೇನೆ ಅಧ್ಯಕ್ಷ ಪಿ.ಸಿ. ರಾಜೇಗೌಡ, ಡಾ|| ಜಿ.ಎಂ.ಗಣೇಶ್ ಸಂವಾದದಲ್ಲಿ ಪಾಲ್ಗೊಂಡಿದ್ದರು.
ಮಲೆನಾಡು ವಿದ್ಯಾಸಂಸ್ಥೆಯ ಸಹ ಕಾ

























Discussion about this post