ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಜಾವಳಿಯ ಹೇಮಾವತಿ ನದಿ ಮೂಲ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಹಾಗೂ ವಿಧಾನಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್ ಹೇಮಾವತಿ ನದಿ ಮೂಲಕ್ಕೆ ಬಾಗಿನ ಸಮರ್ಪಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂಧ್ಯಾ ಸುರೇಶ್ ಪಟ್ಟಣ ಪಂಚಾಯತಿ ಅಧ್ಯಕ್ಷ ಪಟ್ಟಣ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಜಾವಳಿಯ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಉದ್ಘಾಟಿಸಿದರು. ಜನರ ಪಾಲ್ಗೊಳ್ಳುವಿಕೆಯಿಂದ ಪಂಚಾಯಿತಿ ವ್ಯವಸ್ಥೆಗೆ ಹೆಚ್ಚು ಬಲ ಬರಲಿದೆ ಎಂದು ಅಭಿಪ್ರಾಯಿಸಿದರು. ಈ ವೇಳೆ ವಿಧಾನಪರಿಷತ್ ಉಪಸಭಾಪತಿ ಎಂ ಕೆ ಪ್ರಾಣೇಶ್ ಉಪಾಧ್ಯಕ್ಷೆ ನಂದಿನಿ ಸದಸ್ಯರಾದ ಪ್ರದೀಪ್, ಮನೋಹರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅನು ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

























Discussion about this post