ಬೆಂಗಳೂರು (ಕನ್ನಡನಾಡಿ ಸುದ್ದಿಜಾಲ): ರಾಜ್ಯದಲ್ಲಿ ವಿಧಾನ ಮಂಡಲ ಅಧಿವೇಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ಸೆ.13ರಿಂದ ಸೆ.24ರ ವರೆಗೆ ವಿಧಾನಮಂಡಲ ಅಧಿವೇಶನ ನಡೆಸಲಾಗುವುದು ಎಂದು ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಈ ಬಾರಿ ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಯಲಿದೆ ಎಂದರು. ಸಂಪುಟ ಉಪಸಮಿತಿ ರಚನೆಗೆ ಕ್ಯಾಬಿನೇಟ್ ಒಪ್ಪಿಗೆ ಸೂಚಿಸಿದ್ದು, ಮುಖ್ಯಮಂತ್ರಿಗಳಿಗೆ ಪರಮಾಧಿಕಾರ ನೀಡಲಾಗಿದೆ.
ಹೆಣ್ಣುಮಕ್ಕಳ ಶುಚಿತ್ವ ಯೋಜನೆಗೆ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್ ವಿತರಣೆ, ಆರೋಗ್ಯ ಕೇಂದ್ರಗಳಲ್ಲಿ ಬಿಎಸ್ ಸಿ ನರ್ಸಿಂಗ್ ವಿದ್ಯಾರ್ಥಿಗಳ ನೇಮಕಕ್ಕೆ ಅವಕಾಶ, ಆಳಂದದಲ್ಲಿ ಮಿನಿವಿಧಾನಸೌಧ ನಿರ್ಮಾಣಕ್ಕೆ ಅನುದಾನ. ಪಚ್ಚನಾಡಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಸೇರಿದಂತೆ ಹಲವಾರು ಮಹತ್ವದ ಯೋಜನೆಗಳಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು ಎಂದು ಅವರು ಹೇಳಿದ್ದಾರೆ.

























Discussion about this post