ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಆಲ್ದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಕ್ಟೋಬರ ೨ ರಂದು ತಾಲ್ಲೂಕಿನ ಆಲ್ದೂರು ಪಟ್ಟಣದಲ್ಲಿ ಜಿಲ್ಲಾ ಮಟ್ಟದಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಬೆಳಿಗ್ಗೆ ೧೦-೦೦ ಗಂಟೆಗೆ ಜಾಮಿಯಾ ಶಾದಿ ಮಹಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಪಟ್ಟಣದ ಅರಣ್ಯ ಗೇಟ್ನಿಂದ ಜಯಂತಿಯ ಅಂಗವಾಗಿ ಮೆರವಣಿಗೆ ಮುಖ್ಯ ಬೀದಿಯಲ್ಲಿ ಸಾಗಿ ಜಾಮಿಯಾ ಶಾದಿ ಮಹಲ್ ತಲುಪಲಿದೆ. ಮೆರವಣಿಗೆಯಲ್ಲಿ ಸ್ಥಬ್ಧ ಚಿತ್ರ ಭಾಗವಹಿಸಲಿದೆ. ಮಹಾತ್ಮ ಗಾಂದೀಜಿಯವರಿಗೆ ಇಷ್ಟವಾದ ಭಕ್ತಿಗೀತೆಗಳನ್ನು ಕೇಳಿಸಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಆರ್.ದೃವನಾರಾಯಣ ಅವರು ಬಾಗವಹಿಸಲಿದ್ದಾರೆ. ಕೆ.ಪಿ.ಸಿ.ಸಿ ವಕ್ತಾರರು ಹಾಗೂ ಯುವ ವಾಗ್ಮಿಗಳಾದ ನಿಕೇತ ರಾಜ್ ಮೌರ್ಯ ಅವರು ಉಪನ್ಯಾಸ ನಡೆಸಿಕೊಡುವರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಭಾಗವಹಿಸಲಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಆಯೋಜಿಸಿರುವ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಲ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಬೀರ್ ಮನವಿ ಮಾಡಿದ್ದಾರೆ.

























Discussion about this post