ಚಿಕ್ಕಮಗಳೂರು: ರಾಜ್ಯದಲ್ಲಿ ದ್ವಿಭಾಷ ನೀತಿಗೆ ಒತ್ತು ನೀಡಿ. ಜಾರಿಗೊಳಿಸಲು ಮಂದಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಾತ್ಕಾಲಿಕವಾಗಿ ತಡೆಹಿಡಿದು ಪುನರ್ ಪರಿಶೀಲನೆಗೆ ಒಳಪಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ತೇಗೂರು ಜಗದೀಶ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್‌ಕುಮಾರ್ ಅವರಲ್ಲಿ ಮನವಿ ಮೂಲಕ ಒತ್ತಾಯಿಸಿದರು.
ಬಳಿಕ ಮಾತನಾಡಿದ ಅವರು ಶತಮಾನಗಳ ಇತಿಹಾಸ ಇರುವ ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿರುವ ವಿಶ್ವ ಲಿಪಿಗಳರಾಣ ಕನ್ನಡ ಭಾಷೆ. ಆದರೆ ರಾಜ್ಯದಲ್ಲಿ ಬಲವಂತದ ಹಿಂದಿ ಹೇರಿಕೆ ಹೆಚ್ಚುತ್ತಿದ್ದು ಕೂಡಲೇ ಅದನ್ನು ನಿಲ್ಲಿಸಬೇಕು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಶೇಕಡಾ ೩೦ ರಷ್ಟು ಭಾಗ ನಲವತ್ತು ವರ್ಷದ ಮೇಲ್ಪಟ್ಟವರಿಗೂ ಕನ್ನಡ ಭಾಷೆಯನ್ನು ರಾಷ್ಟ್ರ ಭಾಷೆಗೆ ಕೇಂದ್ರ ಸರ್ಕಾರವನ್ನು ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ನಾಡಿನ ಭಾಷೆ, ಸಾಹಿತ್ಯ, ಸಂಸ್ಕೃತಿ.. ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಲಾವಿದರ ಅಭಿವೃದ್ಧಿಗಾಗಿ, ನಾಡಗೀತೆಯ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದರು.
ದೇಶದಲ್ಲಿ ಕನ್ನಡ ಭಾಷೆಗೆ ಕೇಂದ್ರದ ಮಟ್ಟದಲ್ಲಿ ಪ್ರಾಶಸ್ತ್ಯ ಸಿಗದಿರುವುದು ಬೇಸರದ ಸಂಗತಿ. ರಾಜ್ಯದ ಎಲ್ಲಾ ಬ್ಯಾಂಕ್‌ಗಳಲ್ಲಿ ಕನ್ನಡೇತರ ಅಧಿಕಾರಿಗಳಿದ್ದಾರೆ. ಅವರೊಂದಿಗೆ ವ್ಯವಹರಿಸುವುದು ಗ್ರಾಮೀಣ ಜನತೆಗೆ ತೊಡಕಾಗಿದೆ. ಜತೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಿಂದಲೂ ನಮ್ಮ ಭಾಷೆಗೆ ಗಂಡಾಂತರ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯದ ಬಹುತೇಕ ಇಲಾಖೆಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆದೇಶವನ್ನು ಪಾಲನೆ ಮಾಡುತ್ತಿಲ್ಲ. ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸುತ್ತಿದ್ದಾರೆ. ನಾಡಿನ ಸಾರ್ವಭೌಮತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಕೆಲವು ಕ್ರಾಂತಿಕಾರಕ ಬದಲಾವಣೆ ಅಗತ್ಯವಿದೆ. ಕನ್ನಡ ಭಾಷೆಯನ್ನು ರಾಷ್ಟ್ರಭಾಷೆಯಾಗಿ ಮಾಡಲು ರಾಜ್ಯ ಸರ್ಕಾರ ಒತ್ತಡ ಹೇರಬೇಕು. ಇತರ ರಾಜ್ಯಗಳ ಪಠ್ಯಪುಸ್ತಕದಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕನ್ನಡ ಭಾಷೆಗೆ ಆಗುತ್ತಿರುವ ತೊಂದರೆಯನ್ನು ಪುನರ್ ಪರಾಮರ್ಶೆ ಮಾಡಬೇಕು ಎಂದು ಮನವಿ ಪತ್ರದ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ದಶರಥರಾಜ್, ವಿದ್ಯಾರ್ಥಿ ಘಟಕದ ಅಧ್ಯಕ್ಷರಾದ ಭರತ್‌ರಾಜ್, ನಗರ ಘಟಕದ ಪದಾಧಿಕಾರಿ ಹನುಮಂತರಾಜು, ಆನಂದ, ಜಗದೀಶ್. ಕುಮಾರ್ ಆರ್.ಶೆಟ್ಟಿ, ಕಿಶೋರ್ ಸೇರಿದಂತೆ ಮತ್ತಿತರರು ಇದ್ದರು.

























Discussion about this post