• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಪಂಡರವಳ್ಳಿಯಲ್ಲಿ ಶುದ್ದಕುಡಿಯುವ ನೀರು ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ

Shri News Desk by Shri News Desk
Oct 9, 2021, 06:59 am IST
in ಚಿಕ್ಕಮಗಳೂರು
Foundation stone for construction of clean drinking water plant at Pandaravalli

Share on FacebookShare on TwitterTelegram

ಚಿಕ್ಕಮಗಳೂರು: ತಾಲ್ಲೂಕಿನ ಐ.ಡಿ. ಪೀಠ ಗ್ರಾಮಪಂಚಾಯಿತಿ ವ್ಯಾಪ್ತಿಯ ಪಂಡರವಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿ ೨೯ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶುದ್ಧ ಕುಡಿಯುವ ನೀರು ಘಟಕಕ್ಕೆ ಶುಕ್ರವಾರ ಶಾಸಕ ಸಿ.ಟಿ.ರವಿ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಜಲಜೀವನ್ ಮಿಷನ್ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ಇದರಡಿ ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಬೇಕು ಎನ್ನುವ ದೃಢ ಸಂಕಲ್ಪವನ್ನು ದೇಶದ ಪ್ರಧಾನಿಗಳು ಹೊಂದಿದ್ದಾರೆ ಅದನ್ನು ಸಕಾರಗೊಳಿಸುವ ನಿಟ್ಟಿನಲ್ಲಿ ಎಲ್ಲೆಡೆ ಕಾರ್ಯಾರಂಭಗೊಂಡಿವೆ ಎಂದರು.

ಪ್ರಧಾನಿಮಂತ್ರಿ ನರೇಂದ್ರ ಮೋದಿಯವರು ಜಿಲ್ಲೆಗೆ ವಿಶೇಷ ಆದ್ಯತೆ ನೀಡುವ ಮೂಲಕ ಸು. ೧೪೦೦ ಕೋಟಿಗೂ ಹೆಚ್ಚು ಅನುದಾನವನ್ನು ಕೇಂದ್ರದಿಂದ ಬಿಡುಗಡೆಗೊಳಿಸಿದ್ದಾರೆ. ಭದ್ರಾ ಕಣಿವೆಯಿಂದ ಕಡೂರು, ತರೀಕೆರೆ, ಚಿಕ್ಕಮಗಳೂರು ಭಾಗದ ಜನತೆಗೆ ಕುಡಿಯುವ ನೀರು ಪೂರೈಕೆ ಅನುದಾನ. ಜತೆಗೆ ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆಗೆ ಜೆಜೆಎಂ ಅಡಿಯಲ್ಲಿ ಅನುದಾನ ಬಿಡುಗಡೆಗೊಳಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಎಂದು ತಿಳಿಸಿದರು.

ಇಲ್ಲಿನ ಪಂಡರವಳ್ಳಿ ಗ್ರಾಮದಲ್ಲಿ ೨೯ ಲಕ್ಷ ರೂ. ವೆಚ್ಚದಲ್ಲಿ ಶುದ್ದಕುಡಿಯುವ ನೀರು ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದ್ದು ಗುಣಮಟ್ಟದ ಕಾಮಗಾರಿಯೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಸಂಕಷ್ಟದ ಕಾಲದಲ್ಲಿ ದೇಶದ ಪ್ರಧಾನಿಗಳು ಬಡವರ ಪರವಾಗಿ ವಿಶೇಷ ಕಾಳಜಿ ಹೊಂದಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ೧೧ ತಿಂಗಳ ಕಾಲ ಉಚಿತ ಪಡಿತರ, ನೀಡಿದ್ದಾರೆ. ಕೋವಿಡ್ ನಿಯಂತ್ರಣಕ್ಕಾಗಿ ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ, ಜತೆಗೆ ಜನಧನ್ ಖಾತೆ, ಉಜ್ವಲ, ಸೌಭಾಗ್ಯ, ಮಾತೃವಂದನಾ ಸೇರಿದಂತೆ ಹಲವಾರ ಜನಪರ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಕೊಂಡಾಡಿದರು.

ಜಿಲ್ಲೆಯ ಪ್ರವಾಸಿತಾಣಗಳನ್ನು ಸದಾ ಸ್ವಚ್ಚವಾಗಿಟ್ಟುಕೊಳ್ಳಲು ಸ್ಥಳೀಯ ಪಂಚಾಯಿತಿ ನಿಗಾವಹಿಸಬೇಕು, ಪ್ರವಾಸಿಗರಿಗೆ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಬೇಕು, ಮೋಜು, ಮಸ್ತಿ ಮೂಲಕ ಪ್ಲಾಸ್ಟಿಕ್, ಬಾಟಲ್ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದರು.

ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಜೆ.ಡಿ.ಲೋಕೇಶ್ ಮಾತನಾಡಿ ಶಾಸಕರು ಪಂಡವಳ್ಳಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಆಧ್ಯತೆ ನೀಡಿ ವಿಶೇಷ ಅನುದಾನದ ಮೂಲಕ ಕಾಮಗಾರಿಗಳನ್ನು ಕೈಗೊಂಡಿದ್ದಾರೆ, ಶಾಲೆಗಳು, ರಸ್ತೆ, ಕುಡಿಯುವ ನೀರಿನ ಘಟಕ ಒಳಗೊಂಡಂತೆ ಜಿಲ್ಲೆಯಾದ್ಯಂತ ಹಲವು ಕಾಮಗಾರಿಗಳು ನಿರಂತರವಾಗಿ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಪಂಡರವಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸುರೇಶ್ ಮಾತನಾಡಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ೨೯ ಲಕ್ಷದಲ್ಲಿ ಶುದ್ದಕುಡಿಯುವ ನೀರಿನ ಘಟಕ ನಿರ್ಮಾಣವಾಗುತ್ತಿದ್ದು ಇದರಿಂದಾಗಿ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.

ಶಾಸಕರು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿಶೇಷ ಆಧ್ಯತೆ ನೀಡಿ ಸುಮಾರು ೬೦ ಲಕ್ಷಕ್ಕೂ ಹೆಚ್ಚು ಅನುದಾನ ಬಿಡುಗಡೆಗೊಳಿಸಿ ಶಾಲೆ, ಆಸ್ಪತ್ರೆ, ಅಂಗನವಾಡಿ, ಕಾಂಕ್ರಿಟ್ ರಸ್ತೆ, ಒಳಗೊಂಡಂತೆ ವಿವಿಧ ಕಾಮಗಾರಿಗಳನ್ನು ಕೈಗೊಂಡು ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಶಿವೇಗೌಡ, ಗ್ರಾಮಪಂಚಾಯಿತಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Tags: Foundation stone for construction of clean drinking water plant at Pandaravalli
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In