ಚಿಕ್ಕಮಗಳೂರು: ಸಮೀಪದ ಕೆಳಗೂರು ಬಳಿ ನಡೆದ ಭೀಕರ ಅಪಘಾತದಲ್ಲಿ ಕೆಎಸ್ಸಾರ್ಟಿಸಿ ಬಸ್ ಕಾರಿಗೆ ಗುದ್ದಿದ ಬಳಿಕ ನಡೆಸಿದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆಸಿದೆ.
ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಕಬ್ಬಿಣ ಸೇತುವೆಯ ಸಮೀಪ ಸ್ಯಾಂಟ್ರೋ ಕಾರ್ ಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದೆ, ಬಸ್ ಬಳಿ ಇದ್ದ ನಾಲ್ಕು ವಾಹನಗಳಿಗೆ ಗುದ್ದಿದೆ. ಗಾಯಗೊಂಡವರನ್ನು ಸಮೀಪದ ಮಲ್ಲಂದೂರು ಗ್ರಾಮದವರು ಎಂದು ಗುರುತಿಸಲಾಗಿದೆ.
ಪೊಲೀಸರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
KSRTC bus series crash
Discussion about this post