ದೆಹಲಿ : ರಾಜಧಾನಿ ದೆಹಲಿ ಮಂದಿ ಚಳಿಯ ಹೊಡೆತಕ್ಕೆ ತತ್ತರಿಸಿದ್ದಾರೆ. ಇಂದು ಬೆಳಗ್ಗೆ ಸಫ್ದರ್ಜಂಗ್ ಪ್ರದೇಶದಲ್ಲಿ 4 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹಾವಾಮಾನ ಇಲಾಖೆ ತಿಳಿಸಿದೆ. ದೆಹಲಿಯಲ್ಲಿ ಕಳೆದ ಮೂರು ದಿನದಿಂದ ಇದೇ ವಾತಾವರಣವಿದ್ದು, ಜನ ಮನೆಯಿಂದ ಹೊರಬರಲಾರದೆ ಒದ್ದಾಡುತ್ತಿದ್ದಾರೆ.
ರಸ್ತೆಗಳಲ್ಲಿ ಜನ ದಪ್ಪ ರಗ್ಗುಗಳನ್ನು ಹೊದ್ದು ಓಡಾಡುತ್ತಿರುವುದು, ಟೀ ಅಂಗಡಿಗಳ ಮುಂದೆ ಚಳಿ ಕಾಯಿಸಿಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ನಾಳೆ ಕೂಡ ವಾಯುವ್ಯ ಭಾರತದ ಭಾಗಗಳಲ್ಲಿ ಗಂಭೀರ ಸ್ವರೂಪದ ಚಳಿ ಕಾಣಿಸಲಿದೆ. ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಹಿಮಪಾತವು ಬಯಲು ಪ್ರದೇಶಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದೆ.
People reeling under cold stroke in Delhi

























Discussion about this post