• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

38 arrested: ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ, ಕಲ್ಲೆಸೆತ ಪ್ರಕರಣದಲ್ಲಿ 38 ಜನರ ಬಂಧನ

ಗೃಹ ಸಚಿವ ಅರಗ ಜ್ಞಾನೇಂದ್ರ

Shri News Desk by Shri News Desk
Dec 21, 2021, 08:02 am IST
in ರಾಜಕೀಯ
Share on FacebookShare on TwitterTelegram

ಬೆಳಗಾವಿ : ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಭಗ್ನಗೊಳಿಸಿ ಮತ್ತು ಕಲ್ಲೆಸೆತ ತೂರಿದ ಹಾಗೂ ಸರಕಾರಿ ವಾಹನಗಳನ್ನು ಹಾನಿಗೊಳಿಸಿದ ಪ್ರಕರಣದಲ್ಲಿ 38ಜನರನ್ನು ಬಂಧಿಸಿ ಜೈಲುಗಟ್ಟಲಾಗಿದೆ;ಇನ್ನೂ ಬಹಳಷ್ಟು ಜನರನ್ನು ಬಂಧಿಸುವುದಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದರು.

ವಿಧಾನಪರಿಷತ್‍ನಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ, ಶಿವಾಜಿ ಪ್ರತಿಮೆಗೆ ಮಸಿಬಳಿದಿರುವಿಕೆ,ಕಲ್ಲೆಸೆತ ಹಾಗೂ ಕನ್ನಡ ಧ್ವಜಕ್ಕೆ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು.
ಎಂಇಎಸ್‍ನಂತ ಕೆಲದುಷ್ಟ ಶಕ್ತಿಗಳು ತಮ್ಮ ತೀಟೆಗಾಗಿ ಹಾಗೂ ತಮ್ಮ ಅಸ್ತಿತ್ವವನ್ನು ತೋರ್ಪಡಿಸಿಕೊಳ್ಳಲು ಅನಗತ್ಯವಾಗಿ ಈ ರೀತಿಯ ದುಷ್ಕøತ್ಯಗಳನ್ನು ಮಾಡುತ್ತಿವೆ. ಪ್ರಚೋದನೆ ನೀಡಿ ತಮ್ಮ ಬೆಳೆ ಬೇಯಿಸಿಕೊಳ್ಳಲು ಯತ್ನಿಸುವ ಎಂಇಎಸ್ ಪುಂಡರಿಗೆ ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಮರಾಠ ಜನರೇ ಮಂಗಾಳರತಿ ಮಾಡಿದ್ದಾರೆ ಎಂದು ಹೇಳಿದರು.

ಬೆಳಗಾವಿಯಲ್ಲಿ ಕನ್ನಡಿಗರು-ಮರಾಠರು ಅತ್ಯಂತ ಸಾಮರಸ್ಯದಿಂದ ಬದುಕುತ್ತಿದ್ದಾರೆ;ಇವರ ಪ್ರಚೋದನೆಯ ನಾಟಕ ಜನರ ಹತ್ತಿರ ನಡೆಯದು. ಈ ಮುಂಚೆ ಇವರು ನಡೆಸುತ್ತಿದ್ದ ಮಹಾಮೇಳಾವ್‍ಗೆ ಮಹಾರಾಷ್ಟ್ರದಿಂದ ಸಚಿವರು ಬಂದು ಪ್ರಚೋದನೆ ಮಾಡುತ್ತಿದ್ದರು.ಈ ರೀತಿ ಬರುವವರನ್ನು ರಾಜ್ಯದ ಗಡಿಯಲ್ಲಿಯೇ ತಡೆದು ವಾಪಸ್ ಕಳುಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಅವರನ್ನು ಜಾತಿ,ಭಾಷೆ ಮತ್ತು ಪ್ರಾಂತ್ಯದ ಚೌಕಟ್ಟಿನಡಿ ನೋಡುವುದಕ್ಕಾಗುವುದಿಲ್ಲ;ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಪ್ರಾಃತಸ್ಮರಣೀಯರು;ಇಂತಹ ಮಹನೀಯರ ಪ್ರತಿಮೆಗೆ ಭಗ್ನಗೊಳಿಸುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ;ಅಂತಹ ಪುಂಡರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಈ ರೀತಿಯ ಕ್ರಮಕೈಗೊಳ್ಳುವ ಸಂದರ್ಭದಲ್ಲಿ ಅಮಾಯಕರನ್ನು ಹಿಡಿದು ಹಿಂಸಿಸಬೇಡಿ  ಮತ್ತು ದುಷ್ಕøತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಸಚಿವ ಅರಗ ಜ್ಞಾನೇಂದ್ರ ಅವರು ನೆಲ-ಜಲ-ಭಾಷೆಯ ರಕ್ಷಣೆಗೆ ನಮ್ಮ ಸರಕಾರ ಸದಾಬದ್ಧವಿದೆ ಎಂದು ಪುನರುಚ್ಚರಿಸಿದ ಸಚಿವರು ಈ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರಕಾರ ಮತ್ತು ಕೇಂದ್ರ ಸರಕಾರದೊಂದಿಗೆ ಮಾತನಾಡಲಾಗಿದೆ ಎಂದರು.

ವಿಷಯದಲ್ಲಿ ಜನರು ಕೂಡ ಕೆರಳವು ಅಗತ್ಯವಿಲ್ಲ. ಇಡೀ ದೇಶದಲ್ಲಿಯೇ ಅತ್ಯುನ್ನತ ಪೊಲೀಸ್ ವ್ಯವಸ್ಥೆ ಹೊಂದಿರುವ ರಾಜ್ಯ ನಮ್ಮದು;ದುಷ್ಕøತ್ಯ ಎಸಗಿದವರನ್ನು ಮನ್ನಿಸುವ ಪ್ರಶ್ನೆಯೇ ಇಲ್ಲ. ಈ ರಾಜ್ಯದಲ್ಲಿ ಮನಸೋಇಚ್ಛೆ ಬದುಕಬಹುದು ಮತ್ತು ಏನನ್ನು ಮಾಡಿದರೂ ನಡೆಯುತ್ತದೆ ಎನ್ನುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.
ಸದನದಲ್ಲಿ ನಡೆದ ಚರ್ಚೆಯಲ್ಲಿ ಅನೇಕ ಸದಸ್ಯರು ಪಾಲ್ಗೊಂಡು ಈ ಘಟನೆಯನ್ನು ಖಂಡಿಸಿದರು.

ಈ ಘಟನೆಗೆ ಕಾರಣರಾದ ಪುಂಡರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷ ನಿಯಮಗಳಡಿ ಜೈಲುಗಟ್ಟಬೇಕು ಮತ್ತು ಈ ರೀತಿಯ ಘಟನೆಗಳಾಗದಂತೆ ಎಚ್ಚರವಹಿಸಬೇಕು. ಪ್ರತಿಮೆಗಳನ್ನು ಸಂರಕ್ಷಿಸಲು ಕಾಯ್ದೆಗಳಿದ್ದರೇ ಪರಿಷ್ಕರಿಸಿ ಕಠಿಣ ನಿಯಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.

38 arrested

Tags: 38 arrestedTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In