ಚಿಕ್ಕಮಗಳೂರು: ನಗರಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ನಾಲ್ಕು ಪಕ್ಷಗಳು ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಸಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷರು ಎಚ್.ಎಚ್.ದೇವರಾಜ್ ತಿಳಿಸಿದರು
ಅವರು ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಾತ್ಯತೀತ ಜನತಾದಳ, ಬಿಎಸ್ಪಿ,ಕಾಂಗ್ರೆಸ್ ಮತ್ತು ಸಿಪಿಐ ಪಕ್ಷಗಳು ಒಟ್ಟಾಗಿ ಒಮ್ಮತದ ಅಭ್ಯರ್ಥಿಯನ್ನು ೩೫ ವಾರ್ಡ್‌ಗಳಲ್ಲೂ ನಿಲ್ಲಿಸಲು ತೀರ್ಮಾನಿಸಿದ್ದೇವೆ ಎಂದರು.
ಚುನಾವಣೆಯಲ್ಲಿ ಒಟ್ಟಿಗೆ ಸಾಗಲು ಬನ್ನಿ ಎಂದು ಕಾಂಗ್ರೆಸ್ ಮುಖಂಡ ಆಹ್ವಾನ ನೀಡಲಾಗಿದೆ ಎಂದು ಹೇಳಿ, ಕಾಂಗ್ರೆಸ್ ಮುಖಂಡರು ಜಿಲ್ಲಾ ಸಮಿತಿಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಒಂದು ಸುತ್ತಿನ ಮಾತುಕತೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಕ್ಕಮಗಳೂರು ಕ್ಷೇತ್ರ ಸಮಿತಿ ಅಧ್ಯಕ್ಷರು ಪಾಲ್ಗೊಂಡಿದ್ದರೆಂದರು.
ನಗರಸಭೆಯ ೩೫ ವಾರ್ಡ್‌ಗಳಲ್ಲಿರುವ ರಸ್ತೆಗಳು ಸುಸ್ಥಿತಿಯಲ್ಲಿರುವುದನ್ನು ಈ ಕ್ಷೇತ್ರದ ಶಾಸಕ ಸಿ.ಟಿ.ರವಿ ತೋರಿಸಿದರೆ ತಾವು ರಾಜಕೀಯ ನಿವೃತ್ತಿಹೊಂದುವುದಾಗಿ ಸವಾಲ್ ಹಾಕಿ ಒಂದು ವೇಳೆ ಸುಸ್ಥಿತಿಯಲ್ಲಿರುವ ರಸ್ತೆಗಳನ್ನು ತೋರಿಸುವಲ್ಲಿ ವಿಫಲರಾದರೆ ಶಾಸಕ ಸಿ.ಟಿ.ರವಿ ರಾಜಕೀಯ ನಿವೃತ್ತಿ ಘೋಷಿಸುತ್ತಾರೆಯೇ ಎಂದು ಪ್ರಶ್ನಿಸಿದರು.
ಬಿಜೆಪಿ ಶಾಸಕರು ಬಹಿರಂಗ ಗುದ್ದಾಟಕ್ಕೆ ಇಳಿದಿರುವುದರಿಂದ ಅಭಿವೃದ್ಧಿಯಲ್ಲಿ ಈ ಜಿಲ್ಲೆ ಹಿಂದೆಬಿದ್ದಿದ್ದು, ರಾಜಕೀಯ ಡೋಲಾಯಮಾನ ಪರಿಸ್ಥಿತಿಯನ್ನು ತಂದೊಡ್ಡಿದ್ದಾರೆಂದು ತಿಳಿಸಿ, ಮೂಡಿಗೆರೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಅನುದಾನ ಎಷ್ಟೆಂಬುದನ್ನು ಶಾಸಕ ಕುಮಾರಸ್ವಾಮಿ ಬಹಿರಂಗ ಪಡಿಸಬೇಕೆಂದು ಆಗ್ರಹಿಸಿದರು.
ಜಿಲ್ಲಾ ಮಹಾಪ್ರಧಾನಕಾರ್ಯದರ್ಶಿ ಜಿ.ಎಸ್.ಚಂದ್ರಪ್ಪ, ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಉಪಾಧ್ಯಕ್ಷ ಸಾಕಿರ್ ಹುಸೇನ್,ಜೆಡಿಎಸ್ ಮೂಡಿಗೆರೆ ಪರಿಶಿಷ್ಟವಿಭಾಗದ ಅಧ್ಯಕ್ಷ ಹುಣಸೆಮಕ್ಕಿ ಲಕ್ಷ್ಮಣ್ ಮುಖಂಡರಾದ ಕುಮಾರ್,ರಮೇಶ್, ಮಲ್ಲೇಶಪ್ಪ ಇದ್ದರು.

























Discussion about this post