ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆನೆಗಳು ಕಾಣಿಸಿಕೊಂಡು ತೋಟದಲ್ಲಿ ಬೀಡುಬಿಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಮೂಲರಹಳ್ಳಿ, ಗುತ್ತಹಳ್ಳಿಯ ಸುತ್ತಾಮುತ್ತಾ ತೋಟಗಳಿಗೆ ನುಗ್ಗಿ ಕೃಷಿ ಬೆಳೆ ಹಾಳು ಮಾಡುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಮೂಲರಹಳ್ಳಿ ಅಶೋಕ್ ಎಂಬುವರ ತೋಟದಲ್ಲಿ ಅಡಿಕೆ, ಬಾಳೆ ತೆಂಗಿನ ಮರ ನಾಶಪಡಿಸಿದೆ. ಅತಿವೃಷ್ಟಿಯಿಂದ ತಾಲ್ಲೂಕಿನಲ್ಲಿ ಸಾಕಷ್ಟು ಜನರ ಮನೆ ಜಖಂ ಆಗಿದ್ದು, ಇದೀಗ ಕಾಡಾನೆಗಳ ಸಮಸ್ಯೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸರ್ಕಾರ ಇತ್ತ ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.
ಕೆಲವು ತಿಂಗಳುಗಳಿಂದ ತೊಂದರೆ ಕೊಡುತ್ತಿರುವ ಕಾಡಾನೆಗಳನ್ನು ಸ್ಥಳಾಂತರಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

























Discussion about this post