ಬೆಂಗಳೂರು: ಇಂದಿನ ವಿಷಮ ಪರಿಸ್ಥಿತಿಯಲ್ಲಿ ದಮನಿತರ ಪರವಾಗಿ ನಿಂತಿರುವ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ದ್ವಾರಕನಾಥ್ ಅವರು ತಿಳಿಸಿದ್ದಾರೆ. ದೇವರಾಜ್ ಅರಸು ಅವರು ರಾಜಕೀಯದಿಂದ ಜಾತಿಗಳ ಸಮೀಕರಣ ಮತ್ತು ಸಂಪನ್ಮೂಲಗಳ ಕ್ರೊಢೀಕರಣ ಸಾಧ್ಯ ಎಂದು ಹೇಳಿದ್ದರು.
ದೇವರಾಜು ಅರಸು ಅವರ ತತ್ವಗಳ ಮೇಲೆ ಕೆಲಸ ಮಾಡಲು, ಜಾತಿಗಳ ಸಮೀಕರಣ ಹಾಗೂ ಹಿಂದುಳಿದ ಸಮುದಾದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ. ಕೆಳಸ್ತರದವರಿಗೆ ರಾಜಕೀಯ ಪ್ರಾತಿನಿಧ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಪದಾಧಿಕಾರಿಗಳ ನಡುವೆ ಅವರು ಪಕ್ಷಕ್ಕೆ ಸೇರ್ಪಡೆಯಾಗಿ ಮಾತನಾಡಿದರು. ಸಣ್ಣ ಸಮುದಾಯಗಳ ಸಮಸ್ಯೆಗಳನ್ನು ನಿವಾರಿಸಲು ನಾಲ್ಕೂವರೆ ದಶಕಗಳಿಂದ ಕೆಲಸ ಮಾಡುತ್ತಿದ್ದೇನೆ, ಆದರೆ ಇಂದು ಈ ಸಮುದಾಯಗಳ ಪರ ದನಿ ಎತ್ತುವವರು ಕಡಿಮೆಯಾಗಿದ್ದಾರೆ ಎಂದರು.
ದೇಶದಲ್ಲಿ ಫ್ಯಾಸಿಸಮ್ ಹಾಗೂ ಮತಾಂಧ ಶಕ್ತಿಗಳ ಪ್ರಭಾವ ಹೆಚ್ಚುತ್ತಿದ್ದು, ಸಣ್ಣ ಹಾಗೂ ಹಿಂದುಳಿದ ಸಮುದಾಯಗಳನ್ನುಇಜ ಫ್ಯಾಸಿಸ್ಟ್ ಶಕ್ತಿಗಳು ಆವರಿಸಿಕೊಳ್ಳುತ್ತಿವೆ. ಈ ಸಮಯದಲ್ಲಿ ಸಣ್ಣ ಸಮುದಾಯಗಳನ್ನು ಉಳಿಸಲು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಡಾ. ಸಿ.ಎಸ್. ದ್ವಾರಕಾನಾಥ್ ಹೆಳಿದ್ದಾರೆ.

























Discussion about this post