ಚಿಕ್ಕಮಗಳೂರು: ಧಾರ್ಮಿಕ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಬ್ರಹ್ಮಶ್ರೀ ನಾರಯಣ ಗುರು ಅವರ ಕೊಡುಗೆ ಅವಿಸ್ಮರಣೀಯ ಎಂದು ಜಿಲ್ಲಾಧಿಕಾರಿ ಕೆ,ಎನ್. ರಮೇಶ್ ಹೇಳಿದರು.
ಜಿಲ್ಲಾಡಳಿತದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ಸರಳವಾಗಿ ಏರ್ಪಡಿಸಲಾಗಿದ್ದ ನಾರಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ದೇಶದಲ್ಲಿ ತೀವ್ರ ಅಸಮಾನತೆ ತಾಂಡವಾಡುತ್ತಿದ್ದ ಕಾಲದಲ್ಲಿ ಹಿಂದುಳಿದ ಸಮುದಾಯದ ಜನರು ಸ್ಚಾಭಿಮಾನದಿಂದ ಬದುಕ ಬೇಕು ಎಂದು ಹೇಳುವ ಮೂಲಕ ಸಾಮಾಜಿಕ ಹಾಗೂ ಸಮಾನತೆ ಕ್ರಾಂತಿ ಹುಟ್ಟು ಹಾಕುವಲ್ಲಿ ನಾರಾಯಣ ಗುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು, ಶೋಷಿತ ಸಮುದಾಯಗಳು ಕೇವಲ ಧಾರ್ಮಿಕವಾಗಿ ಅಲ್ಲದೆ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದರೆ ಮಾತ್ರ ಮುಂದೆ ಬರಲು ಸಾಧ್ಯ ಎಂದು ಪ್ರತಿಪಾಧಿಸಿದರು ಎಂದು ಹೇಳಿದ ಅವರು ತತ್ವ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ರಮೇಶ್, ಬಿಲ್ಲವ ಸಮಾಜದ ಮುಖಂಡರುಗಳು ಹಾಗೂ ನಾರಾಯಣ ಗುರು ಸೇವಾ ಸಮಿತಿ ಸದಸ್ಯರುಗಳು ಹಾಜರಿದ್ದರು.

























Discussion about this post