ನವದೆಹಲಿ: ರಾಜ್ಯಕ್ಕೆ ನಿತ್ಯ 5 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದು, ಕೇಂದ್ರದ ಹಸಿರು ನಿಶಾನೆ ಲಭಿಸಿದೆ ಎಂದು ಸಿಎಂ ಬಸವರಾಯ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯಕ್ಕೆ ಇದೀಗ ಪ್ರತಿನಿತ್ಯ ೩.೫ಲಕ್ಷದಿಂದ ೪ ಲಕ್ಷ ಡೋಸ್ ಲಸಿಕೆ ಪೂರೈಕೆ ಆಗುತ್ತಿದ್ದರೂ ಸಹ ಸೆಪ್ಟೆಂಬರ್ ತಿಂಗಳಿನಿಂದ ಪ್ರತಿ ನಿತ್ಯ ೫ ಲಕ್ಷ ಲಸಿಕೆ ಹಾಕಲು ಪೂರ್ವ ಸಿದ್ಧತೆ ನಡೆದಿತ್ತು.
ಈ ವಿಚಾರವನ್ನುಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರ ಜೊತೆಗೆ ಸಮಾಲೋಚನೆ ನಡೆಸುವಾಗ ಚರ್ಚೆಗೆ ತರಲಾಗಿತ್ತು. ಅವರು ಪ್ರಸ್ತಾವನೆಗೆ ಒಪ್ಪಿದ್ದು, ಮುಂದಿನ ದಿನಗಳಲ್ಲಿ ನಿತ್ಯ ೫ ಲಕ್ಷ ಡೋಸ್ ಲಸಿಕೆ ನೀಡುವ ಭರವಸೆ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.
ಇದೇ ವೇಳೆ ಕೇಂದ್ರ ಜವಳಿ ಖಾತೆ ಸಚಿವರಾದ ಪಿಯೂಶ ಗೋಯಲ್ ಅವರನ್ನು ಬೆಳಿಗ್ಗೆ ಬೇಟಿ ಮಾಡಿ, ಚರ್ಚೆ ನಡೆಸಿದ್ದು, ಹೊಸ ಜವಳಿ ನೀತಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ ಎಂದರು. ಜೊತೆಗೆ ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಅನುಷ್ಠಾನಕ್ಕೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯ (NATIONAL EDUCATIONAL POLICY) ಅನುಷ್ಠಾನದ ಕುರಿತು ಚರ್ಚೆ ನಡೆಸಿರುವುದಾಗಿ ಅವರು ಸುದ್ಧಿಗಾರರಿಗೆ ತಿಳಿಸಿದರು.

























Discussion about this post