ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಶೇ. 2ಕ್ಕಿಂತ ಕಡಿಮೆ ಇರುವ ಪಾಸಿಟಿವಿಟಿ ದರ ಆಧರಿಸಿ, ಅಂತಹ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಅನುಸರಿಸಿ 6-8ನೇ ತರಗತಿ ಪ್ರಾರಂಭಿಸುವುದಾಗಿ ಕಂದಾಯ ಸಚಿವ ಆ. ಅಶೋಕ್ ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತಾಂತ್ರಿಕ ತಜ್ಞರ ಸಭೆ ನಡೆಸಲಾಗಿತ್ತು. ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಆರ್. ಅಶೋಕ್ ಅವರು ಶನಿವಾರ ಮತ್ತು ಭಾನುವಾರ ಹೊರತುಪಡಿಸಿ, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. ೨ಕ್ಕಿಂತ ಕಡಿಮೆ ಇರುವಂತಹ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ೬ನೇ ತಾರೀಖಿನಿಂದ ೬-೮ನೇ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಬ್ಯಾಚ್ ಮಾದರಿಯಲ್ಲಿ ೬ರಿಂದ ೮ನೇ ತರಗತಿ ಶಾಲೆಗಳು ಸೋಮವಾರದಿಂದ ಶುಕ್ರವಾರದವರೆಗೆ ನಡೆಯಲಿದ್ದು, ಶನಿವಾರ ಮತ್ತು ಭಾನುವಾರ ಸ್ವಚ್ಛತಾ ಕಾರ್ಯ ನಡೆಸಲಾಗುವುದು ಎಂದಿದಾರೆ.
ಇದಕ್ಕೆ ಸಂಬಂಧಿಸಿದಂತೆ, ಕೇರಳ ರಾಜ್ಯದ ವಿದ್ಯಾರ್ಥಿಗಳಿಗೆ ಕೊರೊನ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಶೇ. ೫೦ರಷ್ಟು ಮಕ್ಕಳು ಮಾತ್ರ ಶಾಲೆಗೆ ಹಾಜರಾಗಬೇಕಿದೆ. ಇದೇವೇಳೆ ಶೇ. ೨ಕ್ಕಿಂತ ಹೆಚ್ಚಿರುವಂತಹ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಾಂಭಿಸಲು ಅನುಮತಿ ಇಲ್ಲ ಎಂದು ಸಹ ಆರ್. ಅಶೋಕ್ ತಿಳಿಸಿದ್ದಾರೆ.

























Discussion about this post