* ಸಚಿವರಿಂದ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಪ್ರಾತ್ಯಕ್ಷಿಕೆ ವೀಕ್ಷಣೆ
* ಆಸ್ಟ್ರೇಲಿಯಾ ತಂತ್ರಜ್ಞಾನದಲ್ಲಿ ನಿರ್ಮಾಣ
* ಮೀನುಗಾರರ ಖರೀದಿಗೆ ಸಹಾಯಧನದ ಚಿಂತನೆ
ಮಂಗಳೂರು: ಆಸ್ಟ್ರೇಲಿಯಾ ತಂತ್ರಜ್ಞಾನದಲ್ಲಿ ನಿರ್ಮಾಣವಾಗಿರುವ ಯಂತ್ರ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುತ್ತದೆ, ಅದು ಈ ಭಾಗದ ಮೀನುಗಾರರಿಗೆ ಅತಿ ಉಪಯುಕ್ತ ಎಂದು ಬಣ್ಣಿಸಿದರು. ಸಮುದ್ರದ ಹಳೆ ಬಂದರು ಮಾರ್ಗದ ಮೂಲಕ ಬೆಂಗರೆಗೆ ತೆರಳುವ ಸಂದರ್ಭದಲ್ಲಿ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಅವರು ಮಾತನಾಡಿದರು.
ಮೀನುಗಾರರು ಎಲ್ಲಿಯೇ ಹೋದರೂ, ಯಾವುದೇ ಸಂದರ್ಭದಲ್ಲಿ ಕೂಡ ಅವರಿಗೆ ಸಿಹಿ ನೀರಿನ ಅವಶ್ಯಕತೆ ಬಂದಾಗ ಉಪ್ಪು ನೀರನ್ನು ಸಿಹಿ ನೀರಾಗಿ ಪರಿವರ್ತಿಸುವ ಯಂತ್ರವನ್ನು ಬಳಸಿಕೊಂಡು ಸಿಹಿ ನೀರನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.
ಮೀನುಗಾರರು ಈ ಯಂತ್ರವನ್ನು ಖರೀದಿಸಲು ಸರಕಾರದ ವತಿಯಿಂದ ನೀಡಬಹುದಾದದ ಸಹಾಯಧನದ ಕುರಿತಂತೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಅದನ್ನು ಕಾರ್ಯರೂಪಕ್ಕೆ ತರಲು ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ಬೆಂಗಳೂರಿನ ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಚಾರ್ಯ, ಜಿಲ್ಲಾ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಂ.ಎಲ್. ದೊಡ್ಡಮನಿ ಸೇರಿದಂತೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಸಹ ಇದೇ ವೇಳೆ ಉಪಸ್ಥಿತರಿದ್ದರು.

























Discussion about this post