ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ೪೦ ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಭಾನುವಾರ ಜಿಲ್ಲಾದ್ಯಂತ ೩೬ಮಂದಿ ಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು ತಾಲ್ಲೂಕಿನ ೮ಮಂದಿ, ಕಡೂರು ೫, ತರೀಕೆರೆ ೭, ಮೂಡಿಗೆರೆ ೬, ನರ ಸಿಂಹರಾಜಪುರ ೮, ಶೃಂಗೇರಿಯ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಪತ್ತೆ ಯಾದ ಸೋಂಕಿತರಲ್ಲಿ ೩೩ಮಂದಿ ಹೋಮ್ ಐಸೋಲೇಶನ್‌ಗೆ ಒಳಪಡಿಸಲಾಗಿದೆ. ಇಬ್ಬರು ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಓರ್ವ ವ್ಯಕ್ತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ಸೋಂಕಿನಿಂದ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲವೆಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದ್ದು, ಜಿಲ್ಲೆಯಲ್ಲಿ ೫೦,೦೦೨ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೪೯,೦೩೪ಮಂದಿ ಗುಣಮುಖರಾಗಿದ್ದಾರೆ. ೫೪೩ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಇದುವರೆಗೂ ೩೮೫ಮಂದಿ ಮೃತಪಟ್ಟಿದ್ದಾರೆ.

























Discussion about this post