ಹೆಬ್ರಿ: ಆಗುಂಬೆ ಘಾಟಿಯ ಮೂರನೇ ತಿರುವಿನಲ್ಲಿ ೧೧ ಗಂಟೆ ಸುಮಾರಿಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಸುಮಾರು ಒಂದು ಗಂಟೆಗಿಂತ ಹೆಚ್ಚು ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.
ಕಳೆದ ಕೆಲವು ದಿನಗಳ ಮಳೆ ಇದಕ್ಕೆ ಕಾರಣ ಇರಬಹುದು. ಆಗುಂಬೆ-ಹೆಬ್ರಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಹೀಗಾಗಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ಕಾಯುತ್ತಿದ್ದ ದೃಶ್ಯ ಮಾಮೂಲಿಯಾಗಿತ್ತು.
ಅರಣ್ಯ ಅಧಿಕಾರಿಗಳು ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಕಟ್ಟಿಂಗ್ ಮಿಷನ್ ಮೂಲಕ ಮರವನ್ನು ತುಂಡರಿಸಿ ತೆರವುಗೊಳಿಸಲಾಯ್ತು. ೧೨ ಗಂಟೆಯ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯ್ತು. ಹೆಬ್ರಿ ಪೊಲೀಸರು ಸ್ಥಳದಲ್ಲೇ ಇದ್ದು ಸಂಚಾರ ವ್ಯವಸ್ಥೆ ನಿಯಂತ್ರಿಸಿದ್ದರು.

























Discussion about this post