ಬೆಂಗಳೂರು: ಕೆಂದ್ರ ಸರ್ಕಾರವು ನಿರಂತರವಾಗಿ ಇಂಧನ ಬೆಲೆ ಹೆಚ್ಚಿಸುತ್ತಾ ಬಂದಿದೆ. ಇದರಿಂದಾಗಿ ದಿನಬಳಕೆಯ ವಸ್ತುಗಳ ಬೆಲೆ ದುಪ್ಪಟ್ಟಗಿದೆ ಎಂದು ಕೇಂದ್ರದ ನಡೆ ಖಂಡಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೈಕಲ್ ಜಾಥಾ ಹಮ್ಮಿಕೊಂಡಿತ್ತು.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆತ್. ಪಾಟೀಲ್ ಮೊದಲಾದ ಹಿರಿಯ ನಾಯಕರ ಜೊತೆಗೆ ಕಾಂಗ್ರೆಸ್ ಪಕ್ಷದ ಮಾಜಿ ಮಂತ್ರಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು ಬೆಂಗಳೂರಿನ ಕ್ವೀನ್ ರಸ್ತೆಯ ಕೆಪಿಸಿಸಿ ಕಚೇರಿ ಯಿಂದ ವಿಧಾನಸೌಧದವರೆಗೆ (KPCC office to Vidhana Soudha )ಇಂದು ಬೆಳಿಗ್ಗೆ ಸೈಕಲ್ ಜಾಥಾ ನಡೆಸಿದರು.

ಇದೇ ವೇಳೆ ಸೈಕಲ್ ಜಾಥಾದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಪ್ರಿಯಾಂ ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ಗೋವಿಂದರಾಜು ಮೊದಲಾದ ಮುಖಂಡರು ಸಹ ಭಾಗವಹಿಸಿದ್ದರು.
ಇಳಿವಯೋಮಾನದಲ್ಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ನವರು ಜನತೆಗಾಗಿ ಬಿರುಬಿಸಿಲಿನಲ್ಲಿ ಸೈಕಲ್ ತುಳಿದು ಜಾಥಾದ ಮುಂದಾಳುವಾಗಿ ಕಾಣಿಸಿಕೊಂಡರು.

























Discussion about this post