ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಹೆಚ್ಚುತ್ತಿದ್ದು, ಇಂದಿನಿಂದ ನಾಲ್ಕು ದಿವಸ ಮಳೆ ಹೆಚ್ಚಾರುವುದರಿಂದ ಹೈ ಅಲರ್ಟ್ ಘೋಷಿಸಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ರಾಜ್ಯ ರಾಜದಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಸೂಚನೆ ಘೋಷಣೆಯಾಗಿದೆ.
ಬೆಂಗಳೂರಿನಲ್ಲಿ ಕೂಡ ಸೆ. ೨೫ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ, ಇದರ ಜೊತೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.
ಉತ್ತರ ಭಾರತದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಗುಜರಾತ್ನಲ್ಲಿ ಇಂದಿನಿಂದ ನಾಲ್ಕು ದಿವಸ ಅಂದರೆ ಸೆ. ೨೫ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಸೆ. ೨೩ ರಂದು ವಿಪರೀತ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯಲಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ.
ಪ್ರವಾಹ ಭೀತಿ: ಪಶ್ಚಿಮ ಬಂಗಾಳದಲ್ಲೂ ಮಳೆಯ ಅಬ್ಬರದಿಂದ ಪ್ರವಾಹದ ಭೀತಿ ಎದುರಾಗಿದೆ.
ಭಾರತದ ವಿವಿಧ ರಾಜ್ಯಗಳಲ್ಲಿ ವರುಣನ ಅಬ್ಬರ:
ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒರಿಸ್ಸಾ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಮಹಾರಾಷ್ಟ್ರ, ಗೋವಾ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ.
ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್ನಲ್ಲಿ ಸಹ ಇಂದು ಮಳೆ ಸುರಿಯಲಿದೆ.

























Discussion about this post