• Home
  • About Us
  • Contact Us
  • Terms of Use
  • Privacy Policy
Friday, April 3, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧ: ಕಾಂಗ್ರೆಸ್ ವಾಗ್ದಾಳಿ

ಸರ್ಕಾರ RSSಗೆ ಬಳುವಳಿ ರೂಪದಲ್ಲಿ ಕಡಿಮೆ ಬೆಲೆಗೆ ಜಮೀನು ನೀಡಿದೆ: ಡಿಕೆಶಿ ಆರೋಪ

Shri News Desk by Shri News Desk
Sep 23, 2021, 06:40 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು : ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸೆಂಟರ್ ಫಾರ್ ಎಜ್ಯುಕೇಷನ್ ಅಂಡ್ ಸೋಷಿಯಲ್ ಸ್ಟಡೀಸ್ ಸಂಸ್ಥೆಗೆ (ಸೆಸ್) ಕಡಿಮೆ ದರದಲ್ಲಿ ನೂರಾರು ಎಕರೆ ಭೂಮಿ ನೀಡುವ ತೀರ್ಮಾನವನ್ನು ಕೈ ಬಿಡುವಂತೆ ಪತ್ರಿಕಾಗೋಷ್ಠಿಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಆಗ್ರಹಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನೂರಾರು ಕೋಟಿ ರೂ. ಮೌಲ್ಯದ ಭೂಮಿಯನ್ನು ಕಡಿಮೆ ಬೆಲೆಗೆ ಪರಭಾರೆ ಮಾಡುವ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಇದರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಂದು ಸಹ ಎಚ್ಚರಿಸಿದರು.

ಇದೇ ವೇಳೆ ಮಾತನಾಡಿದ ಅವರು ಸೆಸ್ ಸಂಸ್ಥೆಯಲ್ಲಿರುವವ ಎಲ್ಲರೂ ಆರ್.ಎಸ್.ಎಸ್ ಗೆ ಸೇರಿದವರು. ಇದೊಂದು ಮನುವಾದಿಗಳ ಸಂಸ್ಥೆಯಾಗಿದ್ದು, ಈ ಸಂಸ್ಥೆ ವರ್ಣಾಶ್ರಮ ವ್ಯವಸ್ಥೆಯ ಪುನರ್ ಸ್ಥಾಪನೆಗೆ ಪ್ರಯತ್ನಿಸಲಿದೆ ಎಂದು ಆಪಾದಿಸಿದರು.

ನಿನ್ನೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ. ಅಲ್ಲದೆ ಸೆಸ್ ಸಂಸ್ಥೆ ಈ ವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಬಿಜೆಪಿ ಸರ್ಕಾರ ೨೦/೦೪/೨೦೨೧ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆ.ಐ.ಎ.ಡಿ.ಬಿ ಗೆ ಸೇರಿದ ೧೧೬ ಎಕರೆ ೧೬ ಗುಂಟೆ ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ. ಕೆ.ಐ.ಎ.ಡಿ.ಬಿ ಅವರು ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. ೧ ಕೋಟಿ ೫೦ ಲಕ್ಷದಂತೆ ಒಟ್ಟು ೧೧೬ ಎಕರೆಗೆ ರೂ. ೧೭೫ ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. ೫೦ ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. ೩೦೦ ರಿಂದ ೪೦೦ ಕೋಟಿಗಳಾಗುತ್ತದೆ ಎಂಬ ಮಾಹಿತಿ ನೀಡಿದರು.

ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್.ಎಸ್.ಎಸ್ ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು ಎಂದು ಅವರು ವಾಗ್ದಾಳಿ ನಡೆಸಿದರು.

ಕೊರೊನಾ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿತ್ತು, ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದಾಗಿ ಲೇವಡಿ ಮಾಡಿದರು.

ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ. ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು. ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೆ.ಐ.ಎ.ಡಿ.ಬಿ (KIEDB)ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ ಎಂದವರು ಹೇಳಿದರು.

ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು ಹಾಗೂ ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದರು.

ನಮ್ಮ ಅವಧಿಯಲ್ಲಿ ಯಾವುದೇ ಸಂಸ್ಥೆಗೆ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಭೂಮಿ ನೀಡಿಲ್ಲ. ಈ ಸರ್ಕಾರ ಕೈಗೊಂಡ ತೀರ್ಮಾನ ಪ್ರಶ್ನಿಸುತ್ತೇವೆ. ಕಾನೂನು ಹೋರಾಟ ನಡೆಸುತ್ತೇವೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಇರುವ ನಿಯಮಾವಳಿ ಪರಿಶೀಲನೆ ಮಾಡಿದಾಗ ಈ ಸಂಸ್ಥೆಗೆ ನೀಡಿದ ಪರವಾನಗಿಯಲ್ಲಿ ಅದೆಲ್ಲದರ ಉಲ್ಲಂಘನೆ ಆಗಿದೆ. ಒಂದು ಸಂಸ್ಥೆಯೇ ಇಲ್ಲ. ಜಮೀನು ಕಡಿಮೆ ಬೆಲೆಗೆ ನೀಡುತ್ತಾರೆ ಎಂದು ಪಡೆಯುವುದು ಸರಿಯಲ್ಲ ಎಂದರು.

ಏರ್ ಪೋರ್ಟ್ (BANGALORE INTERNATIONAL AIRPORT) ಪಕ್ಕ ಏರೋಸ್ಪೇಸ್ (AIROSPACE) ಗೋಸ್ಕರ ಕೊಂಡುಕೊಂಡ ಭೂಮಿಯನ್ನು ಶಿಕ್ಷಣ ಸಂಸ್ಥೆಗೆ ನೀಡಿದ್ದು ಸರಿಯಲ್ಲ. ಇಲ್ಲಿ ಒಂದು ಎಕರೆಭೂಮಿಗೆ ಹತ್ತು ಕೋಟಿ ರೂ.ವರೆಗೂ ಮಾರುಕಟ್ಟೆ ಮೌಲ್ಯ ಇದೆ. ಮಾಗಡಿ ಬಳಿ ಸಂಸ್ಕೃತ ವಿಶ್ವವಿದ್ಯಾಲಯ ಕ್ಕೆ ಭೂಮಿ ನೀಡಿದ್ದೀರಿ ಅದರ ಪಕ್ಕದಲ್ಲೇ ಸರ್ಕಾರಿ ಭೂಮಿ ಇದ್ದರೆ ಈ ವಿವಿಗೆ ನೀಡಿ. ಕೈಗಾರಿಕೆಗಳು ಬಂದರೆ ನೀಡಬೇಕೆಂದು‌ಕೊಂಡು ವಶಪಡಿಸಿಕೊಂಡ ಭೂಮಿಯಲ್ಲಿ ಆರ್ ಎಸ್ ಎಸ್ ವಿಶ್ವವಿದ್ಯಾಲಯ ಸ್ಥಾಪನೆ ಏಕೆ? ನಾವು ಸಹ ಸಾಕಷ್ಟು ಭೂಮಿ ನೀಡಿದ್ದೇವೆ. ಸರ್ಕಾರಿ ಭೂಮಿ ರಾಜ್ಯದ ಯಾವುದೇ ಭಾಗದಲ್ಲಿದ್ದರೆ ನೀಡಿ. ಕೈಗಾರಿಕಾ ಭೂಮಿ ಬಳಕೆ ಸರಿಯಲ್ಲ ಎಂದು ಡಿಕೆಶಿ ಹೇಳಿದರು.

ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು, ಕಾಂಗ್ರೆಸ್ ಪಕ್ಷದ ನಾಯಕರು ಭಾಗವಹಿಸಿದ್ದರು.

Tags: Assembly Opposition Leader Siddaramaiah
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In