ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸೆ.೨೭ ಮತ್ತು ೨೯ರಂದು ತಾಲೂಕು ಕೇಂದ್ರಗಳಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯನ್ನು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಬಿ.ಆರ್ ರೂಪ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್,ಸಿ ಪೂರಕ ಪರೀಕ್ಷೆ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರದ ಸರ್ಕಾರಿ ಜೂನಿಯರ್ ಕಾಲೇಜು, ಭುವನೇಶ್ವರಿಪ್ರೌಢ ಶಾಲೆ ಸೇರಿದಂತೆ ೧೧ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಏಕ ಕಾಲದಲ್ಲಿ ನಡೆಸಲಾಗುತ್ತದೆ ಎಂದರು.
ಕೊರೊನಾ ವೈರಸ್ ಹರಡದಂತೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಎಲ್ಲಾ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಿ ಕರ್ತವ್ಯ ನಿರ್ವಹಿಸಬೇಕು, ಪರೀಕ್ಷೆಯು ಎರಡು ದಿನ ನಡೆಯುತ್ತಿದ್ದು ಸೆಪ್ಟೆಂಬರ್ ೨೭ ರಂದು ಕೋರ್ ವಿಷಯಗಳಿಗೆ ಹಾಗೂ ೨೯ ರಂದು ಭಾಷ ವಿಷಯಗಳಿಗೆ ಬೆಳಗ್ಗೆ ೧೦.೩೦ ರಿಂದ ೧.೩೦ ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಪರೀಕ್ಷ ನಿರ್ವಾಹಣೆ ಮತ್ತು ಕೋವಿಡ್ ನಿಯಮಗಳ ನಿರ್ವಹಣೆ ಬಗ್ಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜವಾಬ್ದಾರಿಯಿಂದ ನೋಡಿಕೊಳ್ಳಬೇಕೆಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಶಿಕ್ಷಣಾಧಿಕಾರಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯ ನೋಡಲ್ ಅಧಿಕಾರಿ ಎಂ.ಜಯಣ್ಣ, ಪೂರಕ ಪರೀಕ್ಷೆಯ ಪೂರ್ವ ತಯಾರಿ ಬಗ್ಗೆ ತೆಗೆದುಕೊಂಡು ಕ್ರಮಗಳನ್ನು ಸಭೆಯಲ್ಲಿ ವಿವರಿಸಿದರು. ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

























Discussion about this post