ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸೇತುವೆಯ ಬಳಿ ಭೀಕರ ಅಪಘಾತ ಸಂಭವಿಸಿದೆ.
ಮೂಡಿಗೆರೆ ಬಿಳುಗೊಳದ ಸುಭಾಷ್ ನಗರದ ನಿವಾಸಿ ದಿನೇಶ್ ಬೈಕಿನಲ್ಲಿ ತೆರಳುತ್ತಿದ್ದಾಗ ಅತಿವೇಗವಾಗಿ ಕಾರನ್ನು ಚಲಾಯಿಸಿಕೊಂಡು ಬಂದ ಹಾಸನ ಮೂಲದ ವ್ಯಕ್ತಿಯು ರಭಸವಾಗಿ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ದಿನೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಿನೇಶ್ ನೊಂದಿಗೆ ಬೈಕಿನಲ್ಲಿದ್ದ ಇನ್ನೊಬ್ಬರಿಗೆ ತೀವ್ರವಾಗಿ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗವಾಗಿ ಕಾರ್ ಚಾಲನೆ ಮಾಡಿದ್ದ ವ್ಯಕ್ತಿ ಹಾಸನದ ಮೂಲದವರೆಂದು ತಿಳಿದುಬಂದಿದೆ. ಅತಿವೇಗದ ಚಾಲನೆಯೇ ಈ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ. ಮೂಡಿಗೆರೆಯ ಗೋಣಿಬೀಡು ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

























Discussion about this post