ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿ ತಾಣಗಳ ಪರಿಚಯಿಸುವುದರ ಜೊತೆಗೆ ಸುಸ್ಥಿರ ಪ್ರವಾಸೋದ್ಯಮ ಬೆಳವಣಿಗೆಗೆ ಬೈಕ್ ರ್ಯಾಲಿ ಆಯೋಜನೆ ಸಹಕಾರಿ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹೇಳಿದರು.
ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ರೆಸಾರ್ಟ್ ಮಾಲೀಕರ ಸಂಘ, ಮೋಟೋ ರೋಡ್ಸ್ ಮತ್ತು ಮ್ಯಾಗ್ನಮ್ ಮೋಟರ್ ಸ್ಪೋರ್ಟ್ಸ್ ಚಿಕ್ಕಮಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲೆಯು ಪ್ರಾಕೃತಿಕ ಸೌಂದರ್ಯದ ಜೊತೆಗೆ ಕಣ್ಮನ ಸೆಳೆಯುವ ವಿವಿಧ ಪ್ರವಾಸಿ ತಾಣಗಳನ್ನು ಒಳಗೊಂಡಿದೆ ಆ ನಿಟ್ಟಿನಲ್ಲಿ ನಮ್ಮ ಜಿಲ್ಲೆಯನ್ನು ಪ್ರವಾಸೋದ್ಯಮದ ರಾಜಧಾನಿ ಎಂದರು ಅತಿಶಯೋಕ್ತಿಯಲ್ಲ. ಸುಸ್ಥಿರ ಹಾಗೂ ಅಂತರ್ಗತ ಬೆಳವಣಿಗೆಗಳ ಪ್ರವಾಸೋದ್ಯಮ ಎಂಬ ಸಂದೇಶದೊಂದಿಗೆ ಜಿಲ್ಲೆಯಲ್ಲಿ ಬೈಕ್ ರ್ಯಾಲಿ ಆಯೋಜಿಸಿರುವುದು ಸಂತಸ ತಂದಿದೆ ಎಂದರು.
ಜಿಲ್ಲೆಯ ಪ್ರವಾಸಿ ತಾಣಗಳನ್ನು ವೀಕ್ಷಿಸಲು ವಿವಿಧ ರಾಜ್ಯ, ದೇಶ ವಿದೇಶದಿಂದ ಅಪಾರ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಅಂತರ್ಗತವಾಗಿರುವ ಇಲ್ಲಿನ ಪ್ರತಿ ಪ್ರವಾಸಿ ತಾಣಗಳ ಪರಿಚಯ ಎಲ್ಲರಿಗೂ ಆಗಬೇಕಿದೆ. ತಾಣಗಳ ಮಹತ್ವ, ತಿಳುವಳಿಕೆ ಮೂಡಬೇಕಿದೆ ಎಂದರು.
ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸಲು ವಿಪುಲವಾದ ಅವಕಾಶಗಳಿವೆ. ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಯೋಜನೆ ರೂಪಿಸಲಾಗುವುದು. ಪ್ರವಾಸಿ ತಾಣಗಳಲ್ಲಿ ಪರಿಸರ ಜಾಗೃತಿ, ಜೀವವೈವಿಧ್ಯ ಸಂಕುಲಗಳ ರಕ್ಷಣೆಗಾಗಿ ಬೈಕ್ ರ್ಯಾಲಿ, ಪರಿಸರ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಿ ಆಯೋಜನೆ ಆಗಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿ?ಧಿಕಾರಿ ಎಂ.ಎಚ್. ಅಕ್ಷಯ್ ಮಾತನಾಡಿ ಜಿಲ್ಲೆಯಲ್ಲಿ ವಿವಿಧ ಬಗೆಯ ಜೀವವೈವಿಧ್ಯ ಪ್ರಾಣಿ ಹಾಗೂ ಸಸ್ಯ ಸಂಕುಲಗಳಿದ್ದು ಅವುಗಳನ್ನು ಸಂರಕ್ಷಣೆ ಮಾಡುವ ಬಗ್ಗೆ ಜಾಗೃತಿ ಅಗತ್ಯವಿದೆ . ಜಿಲ್ಲೆಗೆ ಪ್ರತಿವ?ವೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಲಿದ್ದು ಪ್ರವಾಸಿ ತಾಣಗಳ ಪರಿಚಯಿಸುವ ಜತೆಗೆ ಪರಿಸರ ಸ್ವಚ್ಚತೆ ಬಗ್ಗೆ ಜಾಗೃತಿ ಮೂಡಿಸಲು ಇಂತಹ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗಲಿವೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ ಜಿಲ್ಲಾ ಪ್ರವಾಸೋದ್ಯಮದಲ್ಲಿ ೯೫ಕ್ಕೂ ಹೆಚ್ಚು ಪ್ರವಾಸಿ ತಾಣಗಳು ಗ್ರಾಮೀಣ ಭಾಗದಲ್ಲಿಯೇ ಇವೆ. ಪರಿಸರ ಸಂರಕ್ಷಣೆ ಹಾಗೂ ಪ್ರವಾಸೋದ್ಯಮವನ್ನು ಉತ್ತೇಜನಗೊಳಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳ ಅಗತ್ಯವಿದೆ ಎಂದರು.
ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು ಇದಕ್ಕಾಗಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ೩೫ರಿಂದ ೪೦ ಪ್ರವಾಸಿತಾಣಗಳನ್ನು ಆಯ್ಕೆ ಮಾಡುವ ಮೂಲಕ ಸಂಘ- ಸಂಸ್ಥೆ, ಸ್ಥಳೀಯ ಪಂಚಾಯಿತಿಗಳ ಸಹಕಾರದೊಂದಿಗೆ ಅಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗುವುದು, ಪ್ರವಾಸಿ ತಾಣಗಳ ಸ್ವಚ್ಛಗೊಳಿಸುವುದರಿಂದ ಸುಸ್ಥಿರ ಪ್ರವಾಸೋದ್ಯಮಕ್ಕೆ ಅನುಕೂಲವಾಗುವುದಲ್ಲದೆ ಪ್ರವಾಸಿಗರ ಮನದಲ್ಲೂ ಆಹ್ಲಾದಕರ ವಾತಾವರಣ ಮೂಡಲಿದೆ ಎಂದು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್ ಮಾತನಾಡಿ ಬೈಕ್ ರ್ಯಾಲಿಯು ಚಿಕ್ಕಮಗಳೂರಿಂದ ಆರಂಭಗೊಂಡು ಮೂಡಿಗೆರೆ, ದೇವರ ಮನೆ ಮಾರ್ಗವಾಗಿ ಎತ್ತಿನಭುಜದವರೆಗೂ ತಲುಪಲಿದೆ. ಬೈಕ್ ರ್ಯಾಲಿಯಲ್ಲಿ ಜಿಲ್ಲೆಯ ವಿವಿಧ ಭಾಗದ ೪೦ ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದಾರೆ. ಸುಸ್ಥಿರ ಹಾಗೂ ಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮ ಎಂಬ ಸಂದೇಶದ ಅಡಿಯಲ್ಲಿ ಬೈಕ್ ರ್ಯಾಲಿ ಸಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರವಾಸಿ ಅಧಿಕಾರಿ ಜಿ.ನಾಗರಾಜ್, ರೆಸಾರ್ಟ್ ಓನರ್ಸ್ ಅಸೋಸಿಯೇ?ನ್ ಕಾರ್ಯದರ್ಶಿ ಹೇಮಂತ್, ಖಜಾಂಚಿ ಚೇತನ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

























Discussion about this post