ಚಿಕ್ಕಮಗಳೂರು : ಮಲೆನಾಡಿನಲ್ಲಿ ಸಹ ಜನ ಷೋಕಿಗಾಗಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದು, ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಹಾಗೂ ಚಿಕ್ಕಮಗಳೂರು ನಗರದಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ಏಕಕಾಲದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಪ್ರತ್ಯೇಕವಾಗಿ ನಡೆದ ಈ ದಾಳಿಗಳಲ್ಲಿ ಅಪಾರ ಪ್ರಮಾಣದ ಹಣ, ಮೊಬೈಲ್ ಸೇರಿದಂತೆ ಹಲವು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಹಾಗೂ CEN ಪೊಲೀಸರು ನಡೆಸಿದ ಪ್ರತ್ಯೇಕ ಜಂಟಿ ಕಾರ್ಯಾಚರಣೆಯಲ್ಲಿ ಅಪಾರ ಮೌಲ್ಯದ ಹಣ ಹಾಗೂ ಮೊಬೈಲ್ ವಶಪಡೆಯಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದ ದಾಳಿಗೆ ಹತ್ತು ಜನ ಹಾಗೂ ರೂ. ೧೭,000/- ನಗದು ಪೊಲೀಸರು ವಶಕ್ಕೆ ತೆಗೆದುಕೊಂಡರು. ಚಿಕ್ಕಮಗಳೂರಿನಲ್ಲಿ ಮೂರು ಜನ ಹಾಗೂ ರೂ. ೨೧,000/- ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸದರಿ ಕಾರ್ಯಾಚರಣೆಯು ಇನ್ನೂ ಹಲವಾರು ಆಯಾಮಗಳಲ್ಲಿ ತನಿಖೆ ನಡೆಯಲಿದ್ದು ಇನ್ನಷ್ಟು ಆರೋಪಿಗಳ ಸುಳಿವು ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

























Discussion about this post