ಮಹಾರಾಷ್ಟ್ರ: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯ ಮೇಲೆಲ್ಲಾ ನೀರು ಹರಿಯುತ್ತಿದೆ. ನೀರು ತುಂಬಿದ್ದ ಸೇತುವೆಯ ಮೇಲೆ ಬಸ್ ಚಲಾಯಿಸಿದ ಹಿನ್ನೆಲೆ ಬಸ್ಸು ನದಿಯಲ್ಲಿ ಮುಳುಗಡೆಯಾದ ಘಟನೆ ಮಹಾರಾಷ್ಟ್ರ ದ ಉಮರಖೇಡದ ಬಳಿಯಲ್ಲಿ ನಡೆದಿದೆ.
ಸದರಿ ಘಟನೆಯಲ್ಲಿ ೨೨ ಮಂದಿ ನೀರು ಪಾಲಾಗಿದ್ದು, ಆರು ಮಂದಿಯನ್ನು ರಕ್ಷಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಎನ್‌ಡಿಆರ್‌ಎಫ್ (NDRF) ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿದ್ದು ರಕ್ಷಣಾ ಕಾರ್ಯವನ್ನು ನಡೆಸುತ್ತಿದ್ದಾರೆ.
ಸೇತುವೆ ಹಾಗೂ ರಸ್ತೆಯಲ್ಲಿ ನೀರು ತುಂಬಿದ್ದರೂ ಕೂಡ ಬಸ್ಸಿನ ಚಾಲಕ ನಿರ್ಲಕ್ಷ್ಯವನ್ನು ವಹಿಸಿ ಬಸ್ಸನ್ನು ಚಲಾಯಿಸಿದ್ದಾನೆ. ಸ್ಥಳೀಯರು ಬಸ್ಸನ್ನು ಚಲಾಯಿಸದಂತೆ ಮನವಿ ಮಾಡಿದ್ದಾರೆ. ಆದ್ರೂ ಚಾಲಕರ ಮಳೆಯ ನೀರಿನಲ್ಲಿ ಬಸ್ಸನ್ನು ಚಲಾಯಿಸಿದ್ದೇ ದುರಂತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲೀಗ ಚಾಲಕನ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಇನ್ನು ಬಸ್ಸಿನಲ್ಲಿ ಒಟ್ಟು ಎಷ್ಟು ಮಂದಿ ಇದ್ದರೂ ಅನ್ನೋ ಕುರಿತು ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ.

























Discussion about this post