ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯದಲ್ಲಿ ಸುಟ್ಟ ಕಾರು ಮತ್ತು ಮೃತದೇಹ ಪತ್ತೆಯಾಗಿದೆ. ದಟ್ಟವಾದ ಅರಣ್ಯ ಪ್ರದೇಶದಲ್ಲಿ ಆಗುಂಬೆ ವ್ಯಾಪ್ತಿಯ ಮಿಟ್ಲುಗೋಡು ಎಂಬ ಹಳ್ಳಿಯ ಸಮೀಪದ ಮಾರುತಿ ಕಂಪನಿಯ ಶಿಫ್ಟ್ ಕಾರು ಸುಟ್ಟು ಕರಕಲಾಗಿದ್ದು ಆ ಕಾರಿನಲ್ಲಿ ಚಾಲಕನ ಮೃತದೇಹ ಪತ್ತೆಯಾಗಿದೆ.
ಕೆಲವು ದಿನಗಳ ಹಿಂದೆಯೇ ಈ ಕಾರು ಸುಟ್ಟುಹೋಗಿರುವ ಶಂಕೆ ವ್ಯಕ್ತವಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾರು ಮತ್ತು ವ್ಯಕ್ತಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವುದರಿಂದ ಇದು ಕೊಲೆಯೋ? ಆತ್ಮಹತ್ಯೆಯೋ? ಎಂದು ಪೊಲೀಸರ ತನಿಖೆಯ ನಂತರ ತಿಳಿಯಬೇಕಿದೆ.
ಘಟನೆ ನಡೆದ ಸ್ಥಳಕ್ಕೆ ಎಸ್ ಪಿ. ಕೆ ಎಂ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

























Discussion about this post