ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೃಂಗೇರಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಒಬ್ಬ ಮಾಜಿ ಶಾಸಕ ಮತ್ತು ಒಬ್ಬ ಹಾಲಿ ಶಾಸಕರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿಕೊಂಡಿದ್ದಾರೆ. ಎಂ.ಪಿ. ರೇಣುಕಾಚಾರ್ಯ ಮತ್ತು ಡಿ.ಎನ್. ಜೀವರಾಜ್ ಅವರು ಈ ಹಿಂದೆ ಬಿ ಎಸ್ ಯಡಿಯೂರಪ್ಪ ಅವರಿಗೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು.
ಇದರೊಂದಿಗೆ ಬಿಎಸ್ ಯಡಿಯೂರಪ್ಪ ಆಪ್ತರಿಗೆ ಸರ್ಕಾರದಲ್ಲಿ ಆಯಕಟ್ಟಿನ ಸ್ಥಾನಮಾನಗಳು ಮುಂದುವರಿಕೆ ಆದಂತಾಗಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ರೇಣುಕಾಚಾರ್ಯ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿದ್ದಾರೆ

























Discussion about this post