ಬೆಂಗಳೂರು: ಮಹಾತ್ಮಾ ಗಾಂಧೀಜಿಯವರ 153ನೇ ಹುಟ್ಟು ಹಬ್ಬದ ಪ್ರಯುಕ್ತ ಗಾಂಧಿಭವನ, ಬೆಂಗಳೂರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಗಾಂಧಿ ಭವನದ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ ತಿಳಿಸಿದ್ದಾರೆ.
ಇದೇ ಸಂಧರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗಾಂಧಿ ಸೇವಾ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಅಂದು ಬೆಳಿಗ್ಗೆ ೧೧ ಗಂಟೆಗೆ ಗಾಂಧಿ ಭವನದ ಮಹದೇವ ದೇಸಾಯಿಯವರ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದೇ ವೇಳೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಾದೇಶಿಕ ಜನಸಂಪರ್ಕ ಕಾರ್ಯಾಲಯದಿಂದ ಗಾಂಧೀಜಿ ವಿಶೇಷ ಛಾಯಾಚಿತ್ರ ಪ್ರದರ್ಶನ ಮತ್ತು ಪ್ರಕಾಶನ ವಿಭಾಗದಿಂದ ವಿಶೇಷ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ. ದಿನಾಂಕ ೧ ರಿಂದ ೫ರವರೆಗೆ ಬೆಳಿಗ್ಗೆ ೧೦ ಗಂಟೆಯಿಂದ ೫ ಗಂಟೆಯವರೆಗೆ ಮಳಿಗೆ ತೆರೆದಿದ್ದು ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ, ಬೇಂಗೇರಿ, ಖಾದಿ ವಸ್ತ್ರಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಭಾರತ ಪ್ರವಾಸೋದ್ಯಮ ಇಲಾಖೆ ಮಾಹಿತಿ ಮಳಿಗೆ, ಎನ್. ದೇವಿ ಇವರಿಂದ ಅಂಚೆ ಚೀಟಿ ಪ್ರದರ್ಶನ ಸಹ ಗಾಂಧಿ ಭವನದ ಅಂಗಳದಲ್ಲಿ ಅಕ್ಟೋಬರ್ ೨-೪ರವರೆಗೆ ಏರ್ಪಡಿಸಲಾಗಿದೆ.

























Discussion about this post