ಹರಿಯಾಣ: ಕೇಂದ್ರದ ಕೃಷಿ ಕಾಯ್ದೆಯನ್ನು ವಿರೋಧಿಸಿ ಹರಿಯಾಣದಲ್ಲಿ ಶುಕ್ರವಾರ ರೈತರ ಪ್ರತಿಭಟನೆ ಹಿಂಸಾ ರೂಪಪಡೆದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಜಲಫಿರಂಗಿಗಳನ್ನು ಬಳಸಬೇಕಾಯಿತು.
ರಾಜ್ಯದ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಪ್ರತಿಭಟನಾಕಾರರೂ ಭಾಗಿಯಾಗಿದ್ದು, ಚೌಟಾಲಾ ಅವರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರ ಜೊತೆಗೆ ಮಾತಿನ ಚಕಮಕಿ ಉಂಟಾಗಿದೆ.
ಪ್ರತಿಭಟನೆ ನಡೆಸುತ್ತಿದ್ದ ರೈತರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಾಗ ರೈತರು ಬ್ಯಾರಿಕೇಡ್ ಮುರಿಯಲು ಯತ್ನಿಸಿರುವ ಘಟನೆ ನಡೆದಿದೆ. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ.
ಈ ಹಿಂದೆಯೂ ಸಹ, ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ ನಡೆಸುವ ಉದ್ದೇಶದಿಂದ ರೈತರು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಹಲವು ಸಭೆ, ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿತ್ತು.

























Discussion about this post