ವಿನಯ ನಗರ: ವಿಜಯನಗರ ಜಿಲ್ಲೆಗೆ ನೂತನ ಜಿಲ್ಲೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿ.ಪಂ.ಸಿಇಒ ಅಧಿಕಾರಿಗಳನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅನಿರುದ್ಧ ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಕೆ.ಅರುಣ್ ಹಾಗೂ ಜಿ.ಪಂ.ಸಿಇಓ ಆಗಿ ಕೆ.ಎಂ.ಗಾಯತ್ರಿ ಅವರನ್ನು ನೂತನ ವಿಜಯನಗರ ಜಿಲ್ಲೆಗೆ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ನೂತನ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರ ಹುದ್ದೆ ಜೊತೆಗೆ ವಿಜಯನಗರ ನೂತನ ಜಿಲ್ಲೆಯ ವಿಶೇಷ ಅಧಿಕಾರಿಗಳಾಗಿ ಕಳೆದ ಫೆ.27ರಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲಾ ಉದ್ಘಾಟನೆಗೆ ಕ್ಷಣಗಣನೆ ಮಧ್ಯೆಯೇ ಸರ್ಕಾರ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಜಿ.ಪಂ.ಸಿಇಓ ಅಧಿಕಾರಿಗಳನ್ನು ನೇಮಕ ಮಾಡಿದ್ದು, ನೂತನ ಜಿಲ್ಲೆಯ ಕಾರ್ಯ ಚಟುವಟಿಕೆಗಳಿಗೆ ಇನ್ನಷ್ಟು ಶಕ್ತಿ ಸಿಕ್ಕಂತಾಗಿದೆ.
ಶೀಘ್ರದಲ್ಲೇ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ನೇಮಕರಾಗಲಿದ್ದಾರೆ ಎಂದು ಸಚಿವ ಆನಂದಸಿಂಗ್ ಅವರ ಹೇಳಿಕೆ ದಿನವೇ ಮೂವರು ಅಧಿಕಾರಿಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

























Discussion about this post