ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವ್ಯಾಪ್ತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರು ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ. ಕೊಟ್ಟಿಗೆಹಾರ ಹಾಗೂ ಬಣಕಲ್ ನಡುವಿನ ರಾಷ್ಟ್ರೀಯ ಹೆದ್ದಾರಿ ಹೆಬ್ಬರಿಗೆಯಲ್ಲಿ ಈ ಅಪಘಾತ ಉಂಟಾಗಿದೆ.
ಧರ್ಮಸ್ಥಳದಿಂದ ಶಿವಮೊಗ್ಗದ ಕಡೆಗೆ ಒಮಿನಿ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದರು. ವಾಹನದಲ್ಲಿದ್ದ ಎಲ್ಲರೂ ಶಿವಮೊಗ್ಗ ಮೂಲದವರಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಕೂಡಲೇ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸಮಾಜ ಸೇವಕ ಆರಿಫ್ ಕೂಡ ಸ್ಥಳಕ್ಕೆ ತೆರಳಿ ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಹಕರಿಸಿದರು ಎಂದು ತಿಳಿದುಬಂದಿದೆ.

























Discussion about this post