ಮೈಸೂರು: ಇಂದಿನಿಂದ ಅ.7ರವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಅ.7 ರಂದು ವಿಶ್ವವಿಖ್ಯಾತ ದಸರಾ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಭದ್ರತೆಗಾಗಿ ಇಂದಿನಿಂದ ಅ.7 ರವರೆಗೂ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರು, ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.
ಮೆಟ್ಟಿಲು ಹತ್ತುವುದು, ಊಟದ ವ್ಯವಸ್ಥೆ, ಪ್ರಸಾದ ವ್ಯವಸ್ಥೆ ಕೂಡ ಇರುವುದಿಲ್ಲ. ದೇವಾಲಯದ ಆವರಣದಲ್ಲಿ ಮಾತ್ರ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಲು ಅವಕಾಶ ಇದೆ. ಕೆಲಸದ ನಿಮಿತ್ತ ತೆರಳುವ ಸರ್ಕಾರಿ ಅಧಿಕಾರಿಗಳು, ತುರ್ತು ಸೇವಾ ವಾಹನಗಳು ಹಾಗೂ ಚಾಮುಂಡಿಬೆಟ್ಟದ ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಇನ್ಯಾವುದೇ ವಾಹನ ಪ್ರವೇಶ ಇಲ್ಲ.
ಬೆಟ್ಟದ ಗ್ರಾಮಸ್ಥರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದಾಗಿದೆ.

























Discussion about this post