ದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು,, ಕಳೆದ 24 ಗಂಟೆಯಲ್ಲಿ 18,346 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 3,38,53,048ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 29,639ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,31,50,886 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,52,902 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 263 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,49,260ಏರಿಕೆಯಾಗಿದೆ.

























Discussion about this post