ಚಿಕ್ಕಮಗಳೂರು : ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂವಿಧಾನಾತ್ಮಕವಾಗಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ವಾಹನ ಚಲಾಯಿಸಿ ರೈತರ ಹತ್ಯೆಗೆ ಕಾರಣವಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಪುತ್ರನನ್ನು ಬಂಧಿಸಿ ಗಲ್ಲಿಗೇರಿಸಬೇಕು, ಜತೆಗೆ ಆಡಳಿತ ವೈಫಲ್ಯ ಕಂಡಿರುವ ಉತ್ತರ ಪ್ರದೇಶದ ಸರ್ಕಾರವನ್ನು ಕೂಡಲೇ ವಜಾಗೊಳಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯ ಕಾರ್ಯಕರ್ತರು ಪ್ರತಿಭಟನೆ ಮೂಲಕ ಒತ್ತಾಯಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ೫೦ ಕ್ಕೂ ಹೆಚ್ಚು ಕಾರ್ಯಕರ್ತರು ಉತ್ತರ ಪ್ರದೇಶ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಅಲ್ಲಿನ ಆಡಳಿತ ವೈಫಲ್ಯವನ್ನು ಖಂಡಿಸಿ ರಾಷ್ಟçಪತಿ ಆಡಳಿತ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕೆ.ಪಿ. ಅಂಶುಮAತ್ ಮಾತನಾಡಿ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿರುವ ರೈತರ ಮೇಲಿನ ದಾಳಿ ಮತ್ತು ಮಾರಣಹೋಮ ನಿಜಕ್ಕೂ ಖಂಡನೀಯ. ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಅವರ ಬೆಂಗಾವಲು ವಾಹನ ಹರಿಸಿ ರೈತರನ್ನು ಹತ್ಯೆಗೈದು ಹಲವಾರು ರೈತರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವುದಕ್ಕೆ ಕಾರಣರಾದದ್ದು ಅತ್ಯಂತ ಘೋರ ಹಾಗೂ ಅಮಾನವೀಯ ಕೃತ್ಯ. ಇಂಥ ದುಷ್ಕೃತ್ಯ ಹಿಂದೆAದೂ ನಡೆದಿರಲಿಲ್ಲ. ಈ ಕೃತ್ಯಕ್ಕೆ ಕಾರಣರಾದ ಸಚಿವರ ಮೇಲೆ ಮತ್ತು ಅವರ ಬೆಂಗಾವಲು ಪಡೆ ಮೇಲೆ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಆಗ್ರಹಿಸಿದರು.
ಉತ್ತರ ಪ್ರದೇಶ ಸರ್ಕಾರ ಈ ಘಟನೆಯ ವಿಚಾರದಲ್ಲಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವರ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಎಸಗಿದೆ. ಕೂಡಲೇ ರಾಷ್ಟ್ರಪತಿಗಳು ಕ್ರಮಕೈಗೊಳ್ಳಬೇಕು, ಜತೆಗೆ ಅಲ್ಲಿನ ಆಡಳಿತ ಸರ್ಕಾರವನ್ನು ಕೂಡಲೇ ವಜಾಗೊಳಿಸಿ ರಾಷ್ಟçಪತಿ ಆಡಳಿತ ಜಾರಿಗೊಳಿಸುವಂತೆ ಮನವಿ ಮಾಡಿದರು.
ಇಂಥದೊAದು ಘೋರ ಘಟನೆ ನಡೆದಾಗ್ಯೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ವಾಮಿ ಆದಿತ್ಯನಾಥ್ ಅಥವಾ ಯಾವುದೇ ಉನ್ನತಾಧಿಕಾರಿಗಳು ಜವಾಬ್ದಾರಿಯುತ ವರ್ತನೆ ತೋರಿಲ್ಲ. ಗಾಯಗೊಂಡ ರೈತರನ್ನು ಮತ್ತು ಅವರ ಕುಟುಂಬದವರನ್ನು ಸಂಪರ್ಕಿಸುವುದಾಗಲೀ, ಘಟನೆಗೆ ಕಾರಣರಾದವರ ಮೇಲೆ ಕ್ರಮ ಜರುಗಿಸುವ ಭರವಸೆಯನ್ನಾಗಲಿ ನೀಡಿಲ್ಲ. ಇದು ಹಾಡಹಗಲೇ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿರುವ ಸ್ಪಷ್ಟ ಸೂಚನೆ ಎಂದರು.
ಇಂತಹ ಗಂಭೀರ ಪ್ರಕರಣದ ಸಂದರ್ಭ ದೇಶದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟ್ರಪತಿಗಳು ಕೂಡ ಮಧ್ಯ ಪ್ರವೇಶಿಸಬೇಕಿರುವುದು ದೇಶದ ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ತುರ್ತು ಅಗತ್ಯವಾಗಿದೆ. ಮೃತ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್‌ನ ನಾಯಕಿ ಪ್ರಿಯಾಂಕ ಗಾಂಧೀಯವರನ್ನು ವಶಕ್ಕೆ ಪಡೆದಿರುವ ಉತ್ತರ ಪ್ರದೇಶ ಸರ್ಕಾರದ ನಡೆ ಖಂಡನೀಯ. ರೈತರ ಹತ್ಯೆಗೆ ಕಾರಣವಾಗಿರುವ ಆರೋಪಿಯನ್ನು ಸರ್ಕಾರ ಕೂಡಲೇ ಬಂಧಿಸಬೇಕು, ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿAದ ಕೂಡಲೇ ವಜಾಗೊಳಿಸುವಂತೆ ಒತ್ತಾಯಿಸಿದರು.
ಭಾರತದ ಕೃಷಿಗೆ ಮಾರಣಾಂತಿಕವಾಗಿರುವ ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆಯುವAತೆ ರೈತರು ಕಳೆದ ಒಂದು ವರ್ಷದಿಂದ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಸರ್ಕಾರ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಅವರನ್ನು ಮಾರಣ ಹೋಮದ ಮೂಲಕ ಹತ್ಯೆ ನಡೆಸುತ್ತಿದೆ ಎಂದು ಸರ್ಕಾರದÀ ನೀತಿಯ ವಿರುದ್ದ ವಾಗ್ದಾಳಿ ನಡೆಸಿದರು.
ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ ನಗರದಲ್ಲಿ ಪ್ರತಿಭಟನೆ ಕೈಗೊಳ್ಳಲು ನಗರಸಭೆ ಶಾಮಿಯಾನ, ಕುರ್ಚಿ ಹಾಕದಂತೆ ನಿಷೇಧಿಸಿದೆ ಇದು ತೀವ್ರ ಖಂಡನೀಯ. ಇದಕ್ಕೆ ಜಿಲ್ಲಾಡಳಿತ ಅವಕಾಶ ನೀಡಬೇಕು. ಕಾನೂನಾತ್ಮಕವಾಗಿ ಕೋವಿಡ್ ನಿಯಮಾನುಸಾರ ಹೋರಾಟ ನಡೆಸಲು ಅನುಮತಿ ದೊರಕಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್‌ಕುಮಾರ್, ಮುಖಂಡರಾದ ಎಂ.ಎಲ್.ಮೂರ್ತಿ, ಡಿ.ಎಲ್.ವಿಜಯ್‌ಕುಮಾರ್, ರೇಖಾಹುಲಿಯಪ್ಪ ಗೌಡ, ಹಿರೇಮಗಳೂರು ಪುಟ್ಟಸ್ವಾಮಿ, ರಾಮಚಂದ್ರ, ಸುರೇಖ ಸಂಪತ್, ರೂಬೆನ್‌ಮೊಸಸ್ ಸೇರಿದಂತೆ ಮತ್ತಿತರರು ಇದ್ದರು.
Discussion about this post