ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆಗಳಿದ್ದು, ರಾಜ್ಯಾದ್ಯಂತ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈಗಾಗಲೇ ಗುಲಾಬ್ ಚಂಡಮಾರುತ, ಶಾಹೀನ್ ಚಂಡಮಾರುತದ ಪರಿಣಾಮದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೂ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 12ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

























Discussion about this post