ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 52 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಶನಿವಾರ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು, ಕಡೂರು ಹಾಗೂ ಮೂಡಿಗೆರೆಯ ತಲಾ ಓರ್ವ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿದೆ. ಇವರನ್ನು ಹೋಮ್ ಐಸೋಲೇಶನ್ಗೆ ಒಳಪಡಿಸಲಾಗಿದೆ. ಇಂದು ಸೋಂಕಿನಿಂದ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲವೆಂದು ಆರೋಗ್ಯ ಇಲಾಖೆ ದೃಢಪಡಿಸಿದೆ.
ಜಿಲ್ಲೆಯಲ್ಲಿ ಇದುವರೆಗೂ ೫೧,೦೦೯ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೫೦,೨೫೧ ಮಂದಿ ಗುಣಮುಖರಾಗಿದ್ದಾರೆ. ೩೧೧ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು ೩೯೫ಮಂ ದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

























Discussion about this post