• Home
  • About Us
  • Contact Us
  • Terms of Use
  • Privacy Policy
Thursday, August 13, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಹಾನಗಲ್ ಉಪ ಚುನಾವಣೆಯಲ್ಲಿ ಶ್ರೀನಿವಾಸ್ ಮಾನೆಯನ್ನು ಗೆಲ್ಲಿಸಲೇ ಬೇಕು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Shri News Desk by Shri News Desk
Oct 17, 2021, 05:42 pm IST
in ರಾಜ್ಯ
Former chief minister Siddaramaiah at election campaign rally

ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Share on FacebookShare on TwitterTelegram

ಹಾನಗಲ್:  ಕೊವಿಡ್ ಸಂದರ್ಭದಲ್ಲಿ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಶ್ರೀನಿವಾಸ್ ಮಾನೆ ಮಾಡಿದ್ದಾರೆ. ಕಷ್ಟಕಾಲದಲ್ಲಿ ತಮ್ಮ ನೆರವಿಗೆ ಧಾವಿಸಿದ್ದರಿಂದ ಜನರೇ ಅವರನ್ನು ಆಪದ್ಬಾಂಧವ ಎಂದು ಕರೆಯುತ್ತಿದ್ದಾರೆ. ಈ ಬಾರಿ ಅವರನ್ನು ಗೆಲ್ಲಿಸಲೇ ಬೇಕು ಎಂದು ನಿರ್ಧಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು  ಹಾನಗಲ್ ವಿಧಾನಸಭೆ ಕ್ಷೇತ್ರದ ಮಾಸನಕಟ್ಟೆ ಗ್ರಾಮದಲ್ಲಿ  ಅವರು ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿ ಮೆಕ್ಕೆಜೋಳಕ್ಕೆ 1850 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ, ಆದರೆ ಖರೀದಿ ಮಾಡ್ತಿಲ್ಲ. ಖರೀದಿ ಮಾಡದೆ ಬೆಂಬಲ ಬೆಲೆ ಘೋಷಿಸಿ ಏನು ಉಪಯೋಗ? ಬಿಜೆಪಿ ಸರ್ಕಾರದ ಎಲ್ಲಾ ಕರ್ಮಕಾಂಡಗಳಲ್ಲಿ ಬಸವರಾಜ ಬೊಮ್ಮಾಯಿಯವರ ಪಾಲುದಾರಿಕೆ ಇದೆ ಎಂದರು

ಯಡಿಯೂರಪ್ಪ ಸರ್ಕಾರದಲ್ಲಿ ನಡೆದ ಭ್ರಷ್ಟಾಚಾರ ಒಂದಾ ಎರಡಾ? ಬೊಮ್ಮಾಯಿ ಈಗ ಮುಖ್ಯಮಂತ್ರಿ ಆದ ಕೂಡಲೆ ಹಿಂದೆ ಮಾಡಿದ್ದ ಕರ್ಮಗಳೆಲ್ಲಾ ಹೋಗುತ್ತಾ? ಯಡಿಯೂರಪ್ಪನ್ನ ಜೈಲಿಗೆ ಹಾಕ್ತೀವಿ ಅಂತ ಹೆದರಿಸಿ ಮುಖ್ಯಮಂತ್ರಿ ಹುದ್ದೆ ಇಂದ ಕೆಳಗಿಳಿಸಿದ್ರು, ಪಾಪ ಕಣ್ಣೀರು ಹಾಕ್ತಾ ರಾಜೀನಾಮೆ ಕೊಟ್ಟರು. ಯಡಿಯೂರಪ್ಪ ಕೆಳಗಿಳಿಯೋದನ್ನೇ ಕಾಯ್ತಾ ಇದ್ರು ಬೊಮ್ಮಾಯಿ ಎಂದು ಹೇಳಿದರು.

ನಿನ್ನೆ ಸಂಗೂರು ಸಕ್ಕರೆ ಕಾರ್ಖಾನೆ ಬಗ್ಗೆ ಮಾತಾಡಿದ್ದೆ. ಈ ಕಾರ್ಖಾನೆಯ ಆಡಳಿತ ಮಂಡಳಿಗೆ ಉದಾಸಿ ಅವರು ಅಧ್ಯಕ್ಷ ಮತ್ತು ಸಜ್ಜನರ್ ಉಪಾಧ್ಯಕ್ಷ ಆಗಿದ್ದರು. ಕಾರ್ಖಾನೆ ದಿವಾಳಿಯಾಗಿದ್ದು ನಮ್ಮಿಂದಲೋ? ಸಜ್ಜನರ್ ಮತ್ತು ಉದಾಸಿ ಇಂದಲೋ? ಇಂಥವರು ಸಜ್ಜನರಲ್ಲ ದುರ್ಜನರು. ಭ್ರಷ್ಟಾಚಾರದ ಆರೋಪ ಇರುವ ವ್ಯಕ್ತಿಯನ್ನು ಶಾಸಕರಾಗಿ ಆಯ್ಕೆ ಮಾಡ್ತೀರಾ? ಸಜ್ಜನರ್ ಮೇಲೆ ನನಗೆ ವೈಯಕ್ತಿಕ ದ್ವೇಷ ಇಲ್ಲ. ಆದರೆ ಸತ್ಯ ಜನರಿಗೆ ಗೊತ್ತಾಗಬೇಕಲ್ವಾ? ಇವತ್ತು ಸಕ್ಕರೆ ಕಾರ್ಖಾನೆಯನ್ನು ಸಿದ್ದೇಶ್ವರ ಅವರಿಗೆ ಕೊಟ್ಟಿರೋದು ಯಾರು? ಎಂದರು.

ರಾಜ್ಯದಲ್ಲಿ ಬಿಜೆಪಿ ಬಂದು ಎರಡೂ ಕಾಲು ವರ್ಷ ಆಯ್ತು? ಈ ಸರ್ಕಾರ ಜನರಿಗಾಗಿ ಏನಾದ್ರೂ ಮಾಡಿದೆಯಾ? ನಾನು ಏಳು ಕೆ.ಜಿ ಅಕ್ಕಿ ಉಚಿತವಾಗಿ ಕೊಡ್ತಿದ್ದೆ. ಈಗಿನ ಬಿಜೆಪಿ ಸರ್ಕಾರ ಅದನ್ನು ಐದು ಕೆ.ಜಿ ಗೆ ಇಳಿಸಿದೆ. ಅದಕ್ಕೆ ನಾನು ಕೊರೊನಾ ಇದೆ, ಲಾಕ್ ಡೌನ್ ಇದೆ, ಜನರಿಗೆ ದುಡಿಮೆ ಇಲ್ಲ ಹತ್ತು ಕೆ.ಜಿ ಅಕ್ಕಿ ಕೊಡಿ, ಪ್ರತಿ ಬಿಪಿಎಲ್ ಕುಟುಂಬಕ್ಕೆ ಹತ್ತು ಸಾವಿರ ಧನಸಹಾಯ ಮಾಡಿ ಎಂದು ಸದನದಲ್ಲಿ ಹೇಳಿದೆ, ನನ್ನ ಮಾತನ್ನು ಕಿವಿಗೆ ಹಾಕೊಂಡಿಲ್ಲ. ಜನರ ತೆರಿಗೆ ಹಣವನ್ನು ಜನರಿಗೆ ಖರ್ಚು ಮಾಡಲು ಏನು ರೋಗ ಸರ್ಕಾರಕ್ಕೆ? ಮುಂದಿನ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, ಆಗ ಬಡವರಿಗೆ ಹತ್ತು ಕೆ.ಜಿ ಉಚಿತ ಅಕ್ಕಿ ಕೊಡುತ್ತೇವೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಭಾಗ್ಯ, ಸಾಲ ಮನ್ನಾ, ಶಾದಿ ಭಾಗ್ಯ, ಪಶು ಭಾಗ್ಯ, ಇಂದಿರಾ ಕ್ಯಾಂಟೀನ್, ಅನುಗ್ರಹ ಮುಂತಾದ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ಕೇಳಿದ್ರೆ ಕೊರೊನಾಗೆ ಖರ್ಚು ಮಾಡಿದೀವಿ , ನಮ್ಮ ಬಳಿ ದುಡ್ಡಿಲ್ಲ ಎನ್ನುತ್ತಾರೆ. ಈ ಸರ್ಕಾರ ಕೊರೊನಾ ಕಾಲದಲ್ಲೂ ಲೂಟಿ ಮಾಡಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಇಂದಿರಾ ಕ್ಯಾಂಟೀನ್ ಆರಂಭ ಮಾಡುತ್ತೇವೆ. ಎಂದರು

ನಾನು ಮುಖ್ಯಮಂತ್ರಿ ಆಗುವಾಗ ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡುತ್ತಿದ್ದ ಅನುದಾನ ಕೇವಲ 400 ಕೋಟಿ ರೂಪಾಯಿ ಇತ್ತು, ನನ್ನ ಕಡೇ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡಿದ ಅನುದಾನ 3,100 ಕೋಟಿ. ಬಡವರಿಗೆ ಅಕ್ಕಿ ಕೊಟ್ಟು ಜನರನ್ನು ಸೋಮಾರಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳ್ತಾರೆ. ಹಸಿವಿನ ಸಂಕಟ ಗೊತ್ತಿಲ್ಲದವರು ಮಾತ್ರ ಇಂಥಾ ಹೇಳಿಕೆ ಕೊಡಲು ಸಾಧ್ಯ ಎಂದರು

ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಏಳು ವರ್ಷ ತುಂಬಿದೆ. ಸುಳ್ಳು ಭರವಸೆ ನೀಡೋದು ಬಿಟ್ಟು ಜನರಿಗೆ ಬೇರೇನೂ ಮಾಡಿಲ್ಲ. ಅಚ್ಚೇ ದಿನ್ ಬರುತ್ತೆ ಅಂತ ಹೇಳಿದ್ರು, ಬಂತಾ? ಸಬ್ ಕ ಸಾಥ್, ಸಬ್ ಕ ವಿಕಾಸ್ ಅಂತ ಬಾಯಲ್ಲಿ ಹೇಳ್ತಾರೆ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡ್ತಾರೆ. ಎಲ್ಲಾ ಧರ್ಮದ, ಜಾತಿಯ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಏಕೈಕ ಪಕ್ಷ ಕಾಂಗ್ರೆಸ್. ಕಾರಣ ನಾವು ಸಂವಿಧಾನದ ಹಾದಿಯಲ್ಲಿ ನಡೆಯುವವರು. ಸಂಪತ್ತಿನ ಸಮಾನ ಹಂಚಿಕೆ, ಸರ್ವರಿಗೂ ಸಮಾನ ಅವಕಾಶ, ಪರಸ್ಪರ ಪ್ರೀತಿ ವಿಶ್ವಾಸ ದಿಂದ ಬದುಕಬೇಕು ಎಂದು ನಂಬಿದವರು ನಾವು. ಮಹಾತ್ಮ ಗಾಂಧಿಯವರ ಚಿಂತನೆಗಳು ನಮಗೆ ಪ್ರೇರಣೆ ಎಂದು ತಿಳಿಸಿದರು.

ದೇಶದ ಸುಮಾರು 14% ಜನಸಂಖ್ಯೆ ಇರುವ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದ ಒಬ್ಬನೇ ಒಬ್ಬ ಶಾಸಕನಾಗಲೀ, ಸಂಸದನಾಗಲೀ, ಮಂತ್ರಿಯಾಗಲೀ ಬಿಜೆಪಿ ಪಕ್ಷದಲ್ಲಿ ಇಲ್ಲ. ಯಾಕೆ ಅವರು ದೇಶದ ನಾಗರಿಕರಲ್ಲವೇ? ಯಡಿಯೂರಪ್ಪ ಅವರ ಸರ್ಕಾರ ಹಾವೇರಿಯಲ್ಲಿ ರೈತರ ಮೇಲೆ ಗುಂಡು ಹಾರಿಸಿ ಕೊಲ್ಲಿಸಿತ್ತು. ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವರ ಮಗ ಕಾರು ಹತ್ತಿಸಿ, ನಾಲ್ವರು ರೈತರನ್ನು ಹತ್ಯೆ ಮಾಡಿದ್ದಾನೆ. ಇವರನ್ನು ಕೊಲೆಗಡುಕರು, ಗೂಂಡಾಗಳ ಸರ್ಕಾರ ಅನ್ನದೆ ಇನ್ನೇನು ಹೇಳಬೇಕು? ಎಂದರು

ಈಗ ಪೆಟ್ರೋಲ್ ಬೆಲೆ 110, ಡೀಸೆಲ್ ಬೆಲೆ 100, ಗ್ಯಾಸ್ ಬೆಲೆ 950 ರೂಪಾಯಿ ಆಗಿದೆ. ಬಡವರು ಹೇಗೆ ಬದುಕಬೇಕು? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಯುವಕರಿಗೆ ಮೋದಿ ಭರವಸೆ ನೀಡಿದ್ರು, ಪಾಪ ಯುವಕರು ನಂಬಿ ಓಟು ಹಾಕಿ ಗೆಲ್ಲಿಸಿದ್ರು, ಈಗ ಉದ್ಯೋಗ ಕೇಳಿದ್ರೆ ಪಕೋಡ ಮಾರಿ ಎಂದು ಬಿಟ್ಟಿಸಲಹೆ ಕೊಡ್ತಾರೆ. ಹೋಗಲಿ ಪಕೋಡಾ ಆದ್ರೂ ಮಾರಲು ಸಾಧ್ಯವಿದೆಯಾ? ಅಡುಗೆ ಎಣ್ಣೆ ಬೆಲೆ 200 ರೂಪಾಯಿ ಆಗಿದೆ. ಮೋದಿ ಮೋದಿ ಎಂದವರಿಗೆ ತಿರುಪತಿ ನಾಮ ಹಾಕಿದ್ದಾರೆ. ಅದಕ್ಕೆ ಈಗ ಯಾರೂ ಸಾರ್ವಜನಿಕ ಸಭೆಗಳಲ್ಲಿ ಮೋದಿ ಮೋದಿ ಅಂತ ಕೂಗಾಡ್ತಿಲ್ಲ ಎಂದರು

ಕೊರೊನಾ ಓಡಿಸಲು ಲಸಿಕೆ ನೀಡುವ ಬದಲು ಜನರಿಗೆ ದೀಪ ಹಚ್ಚಿ, ಗಂಟೆ ಬಾರಿಸಿ ಎಂದು ದಾರಿ ತಪ್ಪಿಸಿದರು. ಮೋದಿ ತಮಗೆ 56 ಇಂಚಿನ ಎದೆ ಇದೆ ಎನ್ನುತ್ತಿದ್ದರು, ಎದೆ ಎಷ್ಟು ಇಂಚಿದೆ ಎಂಬುದು ಮುಖ್ಯವಲ್ಲ. ಆದ್ರೆ ಆ ಎದೆಯೊಳಗೆ ಬಡವರಿಗಾಗಿ, ಶೋಷಿತರಿಗಾಗಿ ಮಿಡಿಯುವ ತಾಯಿ ಹೃದಯ ಇದೆಯಾ? ಎಂಬುದು ಮುಖ್ಯ. ಮೋದಿಯನ್ನು, ಆರ್.ಎಸ್.ಎಸ್ ಅನ್ನು ಹೊಗಳಿ ಹೊಗಳಿ ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾರೆ. ಇವರು ರಿಮೋಟ್ ಮುಖ್ಯಮಂತ್ರಿ, ಇವರನ್ನು ಬಿಜೆಪಿ ಕಂಟ್ರೋಲ್ ಮಾಡುತ್ತಿದೆ ಎಂದು ನುಡಿದರು.

ಒಂದು ಸಾವಿರ ಕೋಟಿ ಬೆಲೆಬಾಳುವ ಜಮೀನನ್ನು ಕೇವಲ 50 ಕೋಟಿಗೆ ಆರ್.ಎಸ್.ಎಸ್ ಮೂಲದ ಶಿಕ್ಷಣ ಸಂಸ್ಥೆಗೆ ನೀಡಿದ್ದಾರೆ. ಇದು ಬಹುದೊಡ್ಡ ಹಗರಣ. ಇದನ್ನು ಕೇಳಿದ್ರೆ ಸಂಘಪರಿವಾರದವರು ದೇಶಭಕ್ತರು ಎನ್ನುತ್ತಾರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಒಬ್ಬನೇ ಒಬ್ಬ ಆರ್.ಎಸ್.ಎಸ್ ನಾಯಕನ ಹೆಸರು ಹೇಳಲಿ ನೋಡೋಣ. ಇಂಥವರು ಬೇರೆಯವರಿಗೆ ದೇಶಭಕ್ತಿ ಪಾಠ ಮಾಡ್ತಾರೆ ಎಂದರು

ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರಿಗೆ ಮತ ನೀಡಿ, ವಿಧಾನಸಭೆಗೆ ಅವರನ್ನು ಕಳಿಸಿಕೊಡಿ ಎಂದು ಕ್ಷೇತ್ರದ ಮತದಾರರಲ್ಲಿ ಕೈ ಮುಗಿದು ಮನವಿ ಮಾಡುತ್ತೇನೆ. ಎಂದರು.

Tags: Former Chief Minister Siddaramaiah
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In