ಬೆಂಗಳೂರು: ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ ಆಗಲಿದೆ. ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆಯಿಂದ ತೀರ್ಮಾನ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಸಚಿವ ನಾಗೇಶ್ ತಿಳಿಸಿದರು.
ಅವರು ಶಾಲೆ ಆರಂಭಕ್ಕೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿ, 1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ತಜ್ಞರ ಸಮ್ಮತಿ ಒಪ್ಪಿಗೆ ನೀಡಿದೆ. ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಅನುಮತಿ ಕಡ್ಡಾಯ ಎಂದು ತಿಳಿಸಲಾಗಿದೆ ಎಂದಿದ್ದಾರೆ..
ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು ಎಂದೂ ಹೇಳಲಾಗಿದೆ. ತರಗತಿಯಲ್ಲಿ ಶೇಕಡಾ 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಿ ಸದ್ಯ ಶಾಲೆ ತೆರೆಯಲಾಗುವುದು. ತರಗತಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
ಮಕ್ಕಳಿಗೆ ಹಾಜರಾತಿ ಕಡ್ಡಾಯ ಇರುವುದಿಲ್ಲ. ಶಾಲೆಗೆ ಹಾಜರಾಗಲು ಮಕ್ಕಳಿಗೆ ಒತ್ತಾಯ ಇರುವುದಿಲ್ಲ. ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಒಪ್ಪಿಗೆ ಬೇಕು. ಜಾಗದ ಕೊರತೆ ಇರುವಲ್ಲಿ ಶೇ.50ರಷ್ಟು ಮಕ್ಕಳು ಮಾತ್ರ ಹಾಜರಾಗಬೇಕು ಎಂದು ತಿಳಿಸಿದ್ದಾರೆ.
ಸದ್ಯಕ್ಕೆ LKG, UKG ಬಗ್ಗೆ ಇಲಾಖೆ ನಿರ್ಧಾರ ಮಾಡಿಲ್ಲ. ಅಕ್ಟೋಬರ್ 21 ಅಥವಾ 25ರಂದು ಶಾಲೆ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಫೀಸ್ ಬಗ್ಗೆ ಕೋರ್ಟ್ನಿಂದ ಆದೇಶ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

























Discussion about this post