ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವಾರ ಮತೀಯ ಗೂಂಡಾಗಿರಿ ಸಮರ್ಥಿಸಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯಾರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ನಿಂದ ಸಿಎಂಗೆ ನೋಟಿಸ್ ಜಾರಿಯಾಗಿದೆ.
ಮುಖ್ಯಮಂತ್ರಿ ನೀಡಿರೊ ಹೇಳಿಕೆ ಅವರು ಮಾಡಿದ ಪ್ರಮಾಣಕ್ಕೆ ವಿರುದ್ಧವಾದದ್ದು.ಇದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಉಲ್ಲೇಖಿಸಿ ನೋಟಿಸ್ ನೀಡಲಾಗಿದೆ. ಸರ್ವೋಚ್ವ ನ್ಯಾಯಲಯ ಅಂತರ್ ಜಾತಿ ಹಾಗು ಅಂತರ್ ಧರ್ಮ ವಿವಾಹದ ರಕ್ಷಣೆ ಬಗ್ಗೆ ನೀಡಿದ ತೀರ್ಪುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಹಿನ್ನೆಲೆ ನೋಟಿಸ್ ಮೂಲಕ ಸಿಎಂ ತಮ್ಮ ಹೇಳಿಕೆ ಹಿಂಪಡೆದಯ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.
ಸಂವಿಧಾನದ ಮೌಲ್ಯಗಳನ್ನು ಎತ್ತುಹಿಡಿಯಲು ಕೂಡಲೆ ಕ್ರಮ ತೆಗೆದುಕೊಳ್ಳಬೇಕು. ಸರ್ವೋಚ್ಚ ನ್ಯಾಯಾಲಯ ಶಕ್ತಿವಾಹಿಣಿ ಹಾಗು ತೆಹ್ಸೀನ್ ಪೂನಾವಾಲ ಪ್ರಕರಣಗಳಲ್ಲಿ ನೀಡಿದ ತೀರ್ಪುಗಳನ್ನ ಜಾರಿಗೆ ತರಬೇಕೆಂದು ಒತ್ತಾಯ ಮಾಡಲಾಗಿದೆ.

























Discussion about this post