• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

College of Journalism: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ

Shri News Desk by Shri News Desk
Oct 19, 2021, 05:33 am IST
in ರಾಜ್ಯ, ಶಿಕ್ಷಣ
Share on FacebookShare on TwitterTelegram

ಬೆಂಗಳೂರು: ಶಿಕ್ಷಣದಿಂದ ವಂಚಿತರಾದ ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಿಂದ ಕೆಲಸ ಮಾಡುತ್ತಿರುವ ವಿಸ್ತಾರ್‌ ಟ್ರಸ್ಟ್‌, ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳ ಮತ್ತು ಮುಖ್ಯವಾಹಿನಿ ಮಾಧ್ಯಮಗಳ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಹೆಚ್ಚಾಗುವಂತೆ ಮಾಡುವ ಪ್ರಯತ್ನಕ್ಕಾಗಿ ಬೆಂಗಳೂರಿನಲ್ಲಿ ‘ವಿಸ್ತಾರ್‌ ಕಾಲೇಜ್‌ ಆಫ್‌ ಆರ್ಟ್ಸ್‌ ಫಾರ್‌ ವುಮೆನ್ಸ್‌’ (VCAW) ಎಂಬ ನೂತನ ಪದವಿ ಕಾಲೇಜನ್ನು ಪ್ರಾರಂಭಿಸಿದೆ.

ವಿದ್ಯಾರ್ಥಿನಿಯರಿಗಾಗಿ ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಇಂಗ್ಲಿಷ್‌’ ನಲ್ಲಿ ಪದವಿ ತರಗತಿಗಳು ಇದೇ ನವೆಂಬರ್ ತಿಂಗಳಿನಿಂದ ಆರಂಭವಾಗಲಿದೆ. ಬೆಂಗಳೂರು ನಗರದ ಹೊರವಲಯದ ಹೆಣ್ಣೂರು ರಸ್ತೆಯಲ್ಲಿರುವ ಗುಬ್ಬಿ ಕ್ಯಾಂಪಸ್‌ನಲ್ಲಿ ತರಗತಿಗಳು ಆರಂಭವಾಗಲಿವೆ. ಇಂಗ್ಲಿಷ್ ಭಾಷೆಯಲ್ಲಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ವಿಶೇಷ ಬ್ರಿಡ್ಜ್‌ಕೋರ್ಸ್ ಸಹ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ವಿಸ್ತಾರ್‌ ಟ್ರಸ್ಟ್‌ನ ಸಂಸ್ಥಾಪಕರು ಮತ್ತು ಕಾರ್ಯನಿರ್ವಾಹಕ ಟ್ರಸ್ಟಿಯಾದ ದೇವಿಡ್‌ ಸೆಲ್ವರಾಜ್‌, “ನೂತನ ಕಾಲೇಜಿನಲ್ಲಿ ಸಮರ್ಥ ಸಿಬ್ಬಂದಿ ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೋಧಿಸುವ ಸಹಾಯಕ ಪ್ರಾಧ್ಯಪಕರು ಇದ್ದಾರೆ. ವೃತ್ತಿನಿರತ ಪತ್ರಕರ್ತರು, ನೀತಿ ನಿರೂಪಕರು ಮತ್ತು ಸಾರ್ವಜನಿಕ ಬುದ್ಧಿಜೀವಿಗಳು ಸಹ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ.

ಇಲ್ಲಿನ ವಿದ್ಯಾರ್ಥಿಗಳಿಗೆ ಮುಖ್ಯವಾಹಿನಿ ಮತ್ತು ಪರ್ಯಾಯ ಮಾಧ್ಯಮಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಮತ್ತು ಉದ್ಯೋಗ ಒದಗಿಸಲು ನೆರವು ನೀಡಲಾಗುತ್ತದೆ. ನೇರ ತರಗತಿ ಮತ್ತು ಆನ್‌ಲೈನ್ ಮೂಲಕ ಕಲಿಕೆ ಎರಡು ರೀತಿಯಲ್ಲಿ ಕಲಿಸುತ್ತಿದ್ದು, ಬೆಂಗಳೂರಿನಲ್ಲಿರುವ ಆರು ಎಕರೆ ವಿಶಾಲ ಕ್ಯಾಂಪಸ್‌ನಲ್ಲಿ ನೇರ ತರಗತಿಗಳು ನಡೆಯುತ್ತವೆ” ಎಂದಿದ್ದಾರೆ.

“ಸಾಮಾಜಿಕ ಬದ್ದತೆ ಹೊಂದಿರುವ ಪತ್ರಕರ್ತರಿಗೆ ಈ ಕೋರ್ಸ್‌ ಅನ್ನು ಅರ್ಪಿಸುತ್ತೇವೆ. ಈ ಸಂದರ್ಭದಲ್ಲಿ ನಮಗೆ ಗೌರಿ ಲಂಕೇಶ್‌ ಮತ್ತು ರಾಮನ್‌ ಕಶ್ಯಪ್‌ ನೆನಪಾಗುತ್ತಾರೆ. ಗೌರಿ ಕರ್ನಾಟಕದ ಪ್ರಸಿದ್ಧ ಪತ್ರಕರ್ತೆಯಾಗಿದ್ದರೆ ರಾಮನ್‌ ಲಖಿಂಪುರ್‌ ಖೇರಿಯಲ್ಲಿ ರೈತರ ಹೋರಾಟವನ್ನು ವರದಿ ಮಾಡುವಾಗ ಕೊಲೆಯಾದ ಪತ್ರಕರ್ತರಾಗಿದ್ದಾರೆ. ನಮ್ಮ ಕಾಲೇಜಿನ ಪ್ರಾರಂಭದ ಸಮಯದಲ್ಲಿಯೇ ಫಿಲಿಫೈನ್ಸ್‌ನ ಪತ್ರಕರ್ತೆ ಶ್ರೀಮತಿ ಮರಿಯಾ ರೆಸ್ಸಾ ಅವರಿಗೆ 2021ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ಲಭಿಸಿದೆ. ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ರಕ್ಷಿಸುವ ನಿಟ್ಟಿನಲ್ಲಿ ಅವರ ನಿರಂತರ ಬದ್ಧತೆಯ ಕೆಲಸವನ್ನು ನಾವು ಪ್ರಶಂಸಿಸುತ್ತೇವೆ” ಎಂದಿದ್ದಾರೆ.

“ಪ್ರಜಾಪ್ರಭುತ್ವ ಮೌಲ್ಯಗಳನ್ನು ಹೆಚ್ಚಿಸುವುದು ನಮ್ಮ ನೈತಿಕ ಹೊಣೆಗಾರಿಕೆ ಎಂದು ನಾವು ನಂಬುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಚಿತಪಡಿಸುವುದು ಅದರ ಒಂದು ಮಾರ್ಗವಾಗಿದೆ. ಮೂಲಭೂತ ಹಕ್ಕುಗಳು ಎಲ್ಲರಿಗೂ ಸಮಾನವಾಗಿ ಸಿಗುವಂತೆ ಮಾಡುವುದು ನಮ್ಮ ಯೋಜನೆಯ ಉದ್ದೇಶವಾಗಿದೆ” ಎಂದು ಅವರು ವಿವರಿಸಿದ್ದಾರೆ.

‘ಮಾಧ್ಯಮಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಅತಿ ಕಡಿಮೆ ಮಟ್ಟದಲ್ಲಿದೆ. ಮುಖ್ಯವಾಹಿನಿ ಮಾಧ್ಯಮಗಳ ಸಂಪಾದಕರ ಮತ್ತು ಮುಖ್ಯ ಹುದ್ದೆಗಳಲ್ಲಿ ಮಹಿಳೆಯರು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ ಇದೆ. ಹಾಗಾಗಿ ಅಲ್ಲಿ ಲಿಂಗ ಸಮಾನತೆಯನ್ನು ಸಾಧಿಸುವುದು, ಅತ್ಯುತ್ತಮ ಶಿಕ್ಷಣ ನೀಡಿ, ಗುಣಮಟ್ಟದ ಮಹಿಳಾ ಪತ್ರಕರ್ತರನ್ನು ಸೃಷ್ಟಿಸುವುದು ನಮ್ಮ ಮೊದಲ ಉದ್ದೇಶವಾಗಿದೆ

ಮುಖ್ಯವಾಹಿನಿ ಮಾಧ್ಯಮಗಳಿಂದ ಹೊರಗುಳಿದಿರುವ ಜನಸಾಮಾನ್ಯರ, ಶೋಷಿತರ ಸಮಸ್ಯೆಗಳು, ಸಮಕಾಲೀನ ವಿಷಯಗಳು ಮುನ್ನೆಲೆಗೆ ಬರುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಎರಡನೆ ಉದ್ದೇಶ. ತಳ ಸಮುದಾಯಗಳ ಯುವತಿಯರಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುವುದು ಮತ್ತು ಉದ್ಯೋಗದ ಸಾಧ್ಯತೆಗಳನ್ನು ವಿಸ್ತರಿಸುವುದು ನಮ್ಮ ಮೂರನೇ ಉದ್ದೇಶ. ಈ ವಿಷಯಗಳನ್ನು ಕೇಂದ್ರೀಕರಿಸಿ ಪದವಿ ಶಿಕ್ಷಣವನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

VCAW ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಂಯೋಜಿತವಾಗಿದೆ. ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಅರಂಭವಾಗಿದ್ದು, ಹಲವು ಪರಿಣಿತ ಪತ್ರಕರ್ತರಿಂದ ತರಗತಿಗಳು ನಡೆಯಲಿವೆ.

ಕನ್ನಡ ಭಾಷೆಗೆ ಮಹತ್ವ ನೀಡಿರುವ ಕಾಲೇಜು ಕನ್ನಡ ಪ್ರಾಧ್ಯಾಪಕರಾದ ನಾಗಮಣಿ ಶಿವಾರರನ್ನು ಪ್ರಾಂಶುಪಾಲರನ್ನಾಗಿ ನೇಮಿಸಿದೆ. ಕಾಲೇಜಿಗೆ ಸೇರಲು ಆಸಕ್ತಿ ಉಳ್ಳವರು https://visthar.org/ ಅಥವಾ ಸಂಸ್ಥೆಯ ಅಖಿಲ ವಿದ್ಯಾಸಂದ್ರ (9845250955) ಅವರನ್ನು ಸಂಪರ್ಕಿಸಬಹುದು.

Tags: College of JournalismTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In