ಬೆಂಗಳೂರು: ನೇತ್ರದಾನ ಜನಾಂದೋಲನ ಆಗುವಂತೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರು ನಗರದ ಮಿಂಟೋ ಕಣ್ಣಾಸ್ಪತ್ರೆಯ 125ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿದ್ದ ಸಚಿವರು, ಆಸ್ಪತ್ರೆಯಲ್ಲಿ ಗಿಡ ನೆಟ್ಟು, ಕೇಕ್ ಕಟ್ ಮಾಡಿ ಸಿಬ್ಬಂದಿಯೊಂದಿಗೆ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.
ಬಳಿಕ ಮಾತನಾಡಿದ ಸಚಿವರು, ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್‍ಕುಮಾರ್ ನೇತ್ರದಾನ ಮಾಡಿ ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ತಂತ್ರಜ್ಞಾನ ವಿಶಿಷ್ಟವಾಗಿ ಬೆಳೆದಿರುವುದರಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯವಾಗುತ್ತದೆ. ದೇಶದಲ್ಲಿ 3-4 ಕೋಟಿ ಜನರಿಗೆ ಅಂಧತ್ವ ಇದೆ. ಆದ್ದರಿಂದ ದಾನಿಗಳ ಸಂಖ್ಯೆ ಹೆಚ್ಚಾಗಬೇಕಿದೆ. ಮರಣ ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿ ನೀಡಿ ಅವರಿಗೆ ಜಗತ್ತು ನೋಡಲು ಅವಕಾಶ ನೀಡಬೇಕು ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಕೂಡ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ನಾನು ಕೂಡ ಕಳೆದ ವರ್ಷವೇ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ. ಇದನ್ನು ಆಂದೋಲನದಂತೆ ನಡೆಸಿ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
Eye donation
ಇದನ್ನೂ ಓದಿ: Naxal leader B G Krishnamurthy: ಕೇರಳದಲ್ಲಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ- ಸಾವಿತ್ರಿ ಬಂಧನ
ಇದನ್ನೂ ಓದಿ:e Paper – November 10, 2021

























Discussion about this post