• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Kannada language : ಅನ್ಯಭಾಷೆಗಳ ವ್ಯಾಮೋಹದಿಂದ ಕನ್ನಡ ಮೂಲೆಗುಂಪು

Shri News Desk by Shri News Desk
Nov 12, 2021, 09:21 pm IST
in ಚಿಕ್ಕಮಗಳೂರು, ಜಿಲ್ಲೆ
Share on FacebookShare on TwitterTelegram

ಚಿಕ್ಕಮಗಳೂರು: ಬದುಕಿನಲ್ಲಿ ಹಾಸುಹೊಕ್ಕಾಗಿರುವ ಕನ್ನಡ ಭಾಷೆಯು ನಮ್ಮಲ್ಲಿನ ಪರಭಾಷಾ ವ್ಯಾಮೋಹದಿಂದಾಗಿ ಮೂಲೆಗುಂಪಾಗುತ್ತಿದೆ ಅದನ್ನು ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬ ಕನ್ನಡಿಗನಿಂದ ಆಗಬೇಕಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಪಿ.ಸಿ. ರಾಜೇಗೌಡ ಹೇಳಿದರು.

ಅವರು ನಗರದ ಮಾರ್ಕೆಟ್ ರಸ್ತೆಯ ಪಾಂಡುರಂಗ ಆಟೋ ನಿಲ್ದಾಣದ ವೃತ್ತದಲ್ಲಿ ಜಿಲ್ಲಾ ಕನ್ನಡ ಸೇನೆ ವತಿಯಿಂದ ಆಯೋಜಿಸಿದ್ದ 66 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ಭಾಷೆಯ ಅಳಿವು ಉಳಿವು ನಮ್ಮ ಮೇಲೆ ನಿಂತಿದೆಯೇ ಹೊರತು ಅನ್ಯ ಭಾಷಿಕರ ಮೇಲಲ್ಲ, ಅವರ ವಿರುದ್ಧ ದ್ವೇಷ ಕಾರುವುದರಿಂದಲ್ಲ. ಬೇರೆ ಭಾಷೆಗಳ ಮೇಲಿರುವ ಮಮಕಾರ ಕನ್ನಡದ ವಿಷಯಕ್ಕೆ ಬಂದಾಗ ತಿರಸ್ಕಾರವಾಗುತ್ತಿದೆ. ಭಾಷೆಯ ಮೇಲಿನ ಉದಾಸೀನತೆ ತೊರೆದು, ಕನ್ನಡ ಬಳಕೆ ಮತ್ತು ಉಳಿಕೆಗೆ ಪ್ರತಿಯೊಬ್ಬರೂ ಮುಂದಾಗಬೇಕಿದೆ ಎಂದರು.

ಯಾವುದೇ ಭಾಷೆ ಉಳಿಯಬೇಕಾದರೆ ಅದರ ಉಪಯುಕ್ತತೆ ಹೆಚ್ಚಾಗಬೇಕು. ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿಯನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ಕನ್ನಡಗನ ಜವಾಬ್ದಾರಿಯಾಗಿದೆ. ಎಲ್ಲರೂ ಪೋಷಕರು ತಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿಯೇ ಕಲಿಸಬೇಕು ಎಂದು ಮನವಿ ಮಾಡಿದರು.

ಮುಂದಿನ ದಿನಗಳಲ್ಲಿ ನಗರದ ಪ್ರತಿ ವ್ಯಾಪಾರ ಮಳಿಗೆ ಅಂಗಡಿಗಳು ಕಡ್ಡಾಯವಾಗಿ ಕನ್ನಡ ಫಲಕಗಳನ್ನು ಅಳವಡಿಸಲು ಸೂಚಿಸುವಂತೆ ಜಿಲ್ಲಾಧಿಕಾರಿ ಹಾಗೂ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ ಪರಭಾಷೆ ವ್ಯಾಮೋಹದಿಂದಾಗಿ ಇಂದು ಕನ್ನಡ ಅಳಿನಂಚಿನತ್ತ ಸಾಗುತ್ತಿದೆ. ಕನ್ನಡ ಭಾಷೆಯನ್ನು ಮನೆ ಮನಗಳಲ್ಲಿ ಬಳಸಬೇಕು. ಕನ್ನಡಲ್ಲೇ ವ್ಯವಹರಿಸಿ, ಕನ್ನಡ ಭಾಷೆಯನ್ನು ಮತ್ತಷ್ಟು ಬೆಳೆಸಲು ಎಲ್ಲಾ ಕನ್ನಡಿಗರು ಶ್ರಮಿಸಿ, ಆರಾಧಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಕನ್ನಡ ಭಾಷೆ ಅಭಿವೃದ್ಧಿಗಾಗಿ ಕನ್ನಡ ಸಾಹಿತ್ಯ ಪರಿಷತ್, ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಂಸ್ಕೃತಿ ಇಲಾಖೆ ಜತೆಗೆ ನೂರಾರು ಕನ್ನಡ ಪರ ಸಂಘಟನೆಗಳು ಇದ್ದರು ಕನ್ನಡ ನಶಿಸಿ ಹೋಗುತ್ತಿರಲು ಕಾರಣವೇನು ಎಂಬುದನ್ನು ಅರಿಯಬೇಕಿದೆ. ಅನ್ಯಭಾಷಿಕರು ಕನ್ನಡ ಕಲಿಯುವಂತೆ, ಕನ್ನಡ ಸಂಸ್ಕೃತಿಯ ಒಳಗೆ ಬರುವಂತೆ ನಾವೇನಾದರೂ ಗಮನಾರ್ಹ ಪ್ರಯತ್ನ ಮಾಡಿದ್ದೇವೆಯೇ? ಎಂಬುದನ್ನು ಸರ್ಕಾರ ವಿಮರ್ಶೆ ಮಾಡಬೇಕಿದೆ. ನೆಲಜಲದ ಋಣವನ್ನು ತೀರಿಸುವುದೆಂದರೆ ಅದು ನಾವು ಕನ್ನಡ ಭಾಷೆಯನ್ನು ಆಡು ಭಾಷೆಯಾಗಿ ದಿನನಿತ್ಯದ ಬದುಕಿನೊಂದಿಗೆ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ ದ್ರಾವಿಡ ಭಾಷೆಗಳಲ್ಲೊಂದಾದ ಕನ್ನಡಕ್ಕೆ ಸರಿ ಸುಮಾರು ೨೫೦೦ ವರ್ಷಗಳ ಇತಿಹಾಸವಿದೆ. ಅಂತಹ ಕನ್ನಡವನ್ನು ಉಳಿಸಿ, ಬೆಳೆಸಬೇಕಾದ ಅನಿವಾರ್ಯತೆ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ಭಾಷೆಯೊಂದು ಜೀವಂತವಾಗಿ ಉಳಿಯುವುದು ನಮ್ಮ ಮಕ್ಕಳು ಕಲಿಯುವುದರಿಂದ, ಮಾತನಾಡುವುದರಿಂದಲೇ ಹೊರತು ಭಾಷಾಭಿಮಾನದ ವೀರಾವೇಶದ ಮಾತುಗಳಿಂದಲ್ಲ ಎಂದರು.

ಕನ್ನಡ ಸೇನೆ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಮರಬೈಲು ಮಾತನಾಡಿ ಪ್ರತಿಯೊಬ್ಬರು ತಮ್ಮ ಮಾತೃ ಭಾಷೆಗೆ ಹೆಚ್ಚು ಮಹತ್ವ ನೀಡಬೇಕು, ಇವತ್ತು ನಮ್ಮ ಮಕ್ಕಳಿಗೆ ಕನ್ನಡ ಕಲಿಸದೇ ಇದ್ದರೆ ಮುಂದೊಂದು ದಿನ ಕರ್ನಾಟಕದಲ್ಲಿ ಕನ್ನಡದ ಫಲಕಗಳನ್ನು ಎಷ್ಟು ದಪ್ಪ ಅಕ್ಷರಗಳಲ್ಲಿ ಬರೆದು ಹಾಕಿದರೂ ಓದುವುದಕ್ಕೂ ಜನ ಗತಿ ಇರುವುದಿಲ್ಲ ಈ ಬಗ್ಗೆ ಕನ್ನಡವನ್ನು ಉಳಿಸಿ, ಬೆಳೆಸುವ ಕಾರ್ಯವಾಗಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕನ್ನಡ ಸೇನೆ ಮುಖಂಡ ವಿನಯ್, ಕನ್ನಡ ಸೇನೆ ಆಟೋ ನಗರಾಧ್ಯಕ್ಷ ಜಯಪ್ರಕಾಶ್, ನಗರ ಉಪಾಧ್ಯಕ್ಷ ಶಂಕರೇಗೌಡ್ರು, ಕಳವಾಸೆ ರವಿ, ಲವ, ಹಾಗೂ ಆಟೋ ಚಾಲಕರು ಸೇರಿದಂತೆ ಮತ್ತಿತರರು ಇದ್ದರು.

ಇದನ್ನೂ ಓದಿ:  ಅಳಿವಿನಂಚಿನಲ್ಲಿರುವ ಭಾರತೀಯ ಭಾಷೆಗಳಲ್ಲಿ ಕನ್ನಡವೂ ಒಂದು : ಮಂಜುನಾಥ ಸ್ವಾಮಿ ಆತಂಕ

Tags: multilingualismteutomaniaಜಿಲ್ಲಾ ಕನ್ನಡ ಸೇನೆ
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In