ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 255 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 7 ಜನರು ಸೋಂಕಿಗೆ ಬಲಿಯಾಗಿದ್ದು, 667 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,92,276ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,153ಕ್ಕೆ ತಲುಪಿದೆ.
ಇದನ್ನೂ ಓದಿ: Tamil Nadu: ಚೆನ್ನೈ ಸಹಿತ ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7,493ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಏಳು ಸೋಂಕಿತರು ಬಲಿ: ಬೆಳಗಾವಿ 1, ಬೆಂಗಳೂರು ನಗರ 2, ಚಿತ್ರದುರ್ಗ 1, ದಕ್ಷಿಣ ಕನ್ನಡ 1, ಧಾರವಾಡ 1, ತುಮಕೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: -ರಾಜ್ಯದಲ್ಲಿ ಹೊಸದಾಗಿ 255 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 1, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 163, ಚಾಮರಾಜನಗರ 1, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 13, ದಾವಣಗೆರೆ 1, ಧಾರವಾಡ 1, ಹಾಸನ 3, ಕಲಬುರಗಿ 3, ಕೊಡಗು 7, ಕೋಲಾರ 6, ಮೈಸೂರು 19, ಶಿವಮೊಗ್ಗ 9, ತುಮಕೂರು 2, ಉಡುಪಿ 8, ಉತ್ತರ ಕನ್ನಡ ಜಿಲ್ಲೆಯಲ್ಲಿ 8 ಪ್ರಕರಣ ಪತ್ತೆಯಾಗಿವೆ.
ಇದನ್ನೂ ಓದಿ: E-Shram: ಇ-ಶ್ರಮ್ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿಗೆ ಡಿಸಿ ಕರೆ
ರಾಜಧಾನಿಯಲ್ಲಿ 163 ಜನರಿಗೆ ಕೊರೋನ ದೃಢ ರಾಜಧಾನಿಯಲ್ಲಿ ಮಂಗಳವಾರದಂದು 163 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,54,256 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,314 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,31,780 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
Corona firm for 255 people in the state

























Discussion about this post