ಬೆಂಗಳೂರು: ಬೆಂಗಳೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಂಪಿಗೆ ನಗರದ ವಿ ಮ್ಯಾಕ್ಸ್ ಚಾಲೇಟ್ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಅಪಾರ್ಟ್ ಮೆಂಟ್ ನಲ್ಲಿರುವ ಪ್ಲಾಟ್ ನಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ.
ಬೆಂಕಿಯಿಂದ ಪಾರಾದ ಅಕ್ಕಪಕ್ಕದ ಪ್ಲಾಟ್ ನಲ್ಲಿರುವ ನಿವಾಸಿಗಳು ಓಡೋಡಿ ಹೊರಗೆ ಬಂದಿದ್ದಾರೆ. ಇದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಯಾವ ಕಾರಣಕ್ಕೆ ಬೆಂಕಿ ಸಂಭವಿಸಿದೆ ಎಂಬ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.
ಇತ್ತೀಚಿಗೆ ಅಪಾರ್ಟ್ ಮೆಂಟ್ ಗಳಲ್ಲಿ ಬೆಂಕಿ ಅವಘಡ ಸಂಭವಿಸುತ್ತಲೆ ಇದೆ. ಮುಂಬೈ ಹಾಗೂ ಬೆಂಗಳೂರಿನಲ್ಲಿ ಇತ್ತೀಚಿಗೆ ಬೆಂಕಿ ಅವಘಡ ಸಂಭವಿಸಿದೆ
ಅಗ್ನಿಶಾಮಕದಳದವರು ಅಗ್ನಿ ನಂದಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Fire breaks out in apartment in Bengaluru
























Discussion about this post